ಪದವೀಧರ ಕ್ಷೇತ್ರ ಚುನಾವಣೆ: ವಾಟಾಳ್ ನಾಮಪತ್ರ ಸಲ್ಲಿಕೆ

MLC graduate election vatal Nagaraj files nomination from kalburgi

22-05-2018

ಕಲಬುರಗಿ: ಈಶಾನ್ಯ ಭಾಗದ ಪದವೀಧರ ಕ್ಷೇತ್ರದ ಚುನಾವಣೆಗೆ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರ.ಗೋವಿಂದ್, ಕನ್ನಡ ಸೇನೆ ಅಧ್ಯಕ್ಷ ಎಸ್.ಕುಮಾರ್, ಕರವೇ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಸಮಗ್ರ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಕನ್ನಡ ನಾಡಿನಾದ್ಯಂತ ಹೋರಾಟ ಮಾಡುತ್ತಿದ್ದೇವೆ. ಹಿಂದುಳಿದ ಭಾಗದವರ ಧ್ವನಿಯಾಗಬೇಕೆಂಬ ದೃಷ್ಟಿಯಿಂದ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಖಾಡಕ್ಕಿಳಿಯುತ್ತಿದ್ದೇನೆ ಎಂದರು. ಹೈದರಾಬಾದ್ ಕರ್ನಾಟಕ ಭಾಗ ತೀರಾ ಹಿಂದುಳಿದಿದ್ದು, ಹೆಚ್ಚು ಪ್ರಗತಿಯನ್ನು ಕಾಣಬೇಕಿದೆ. ಗೆದ್ದರೂ-ಸೋತರೂ ಈ ಭಾಗದ ಅಭಿವೃದ್ಧಿಗಾಗಿ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

vatal Nagaraj election ವಿಧಾನ ಪರಿಷತ್ ಹೋರಾಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ