ವಿಧಾನಸೌಧದ ಸುತ್ತಮುತ್ತ ಭಾರೀ ಭದ್ರತೆ

High police security near vidhana soudha

23-05-2018

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರ ಸ್ವಾಮಿ ಅವರು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಕಾರ್ಯಕರ್ಮಕ್ಕೆ ವಿಧಾನಸೌಧದೆದುರು ಬೃಹತ್ ವೇದಿಕೆ ಸಿದ್ಧವಾಗಿದೆ. 11 ಎಲ್.ಸಿ.ಡಿ ಪರದೆಗಳ ವ್ಯವಸ್ಥೆ. 80 ಸಾವಿರಕ್ಕೂ ಅಧಿಕ ಆಸನಗಳ ವ್ಯವಸ್ಥೆ. ‌ಗಣ್ಯಾತಿ ಗಣ್ಯರಿಗೆ ವಿಶೇಷ ಆಸನದ ವ್ಯವಸ್ಥೆ. ಪ್ರಮುಖ ನಾಯಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ. ಅಂಬೇಡ್ಕರ್ ವೀದಿ ತುಂಬಾ ಖುರ್ಚಿಗಳ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಅಂಬೇಡ್ಕರ್ ವೀದಿ ಸಂಚಾರ ಬಂದ್ ಆಗಲಿದೆ. ವಿಧಾನಸೌಧದ ಸುತ್ತಮುತ್ತ ಭಾರೀ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.


ಸಂಬಂಧಿತ ಟ್ಯಾಗ್ಗಳು

H.D kumaraswamy vidhana soudha ಅಂಬೇಡ್ಕರ್ ಪರದೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ