ಕಪ್ಪುಪಟ್ಟಿ ಧರಿಸಿ ಬಿಜೆಪಿಯಿಂದ ತೀವ್ರ ಪ್ರತಿಭಟನೆ

BJP protest different places of the state tie with black tag

23-05-2018

ಮೈಸೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಜನಮತ ವಿರೋಧಿ ದಿನ ಆಚರಿಸಿದೆ. ಮುಖ್ಯಮಂತ್ರಿಯಾಗಿ ಹೆಚ್.ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸುವುದನ್ನು ವಿರೋಧಿಸಿ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.

ವರುಣಾ ಹಾಗೂ ಟಿ.ನರಸೀಪುರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಪಟ್ಟಣದ ಖಾಸಗಿ ಬಸ್ ನಿಲ್ದಾಣದ ವೃತ್ತದಲ್ಲಿ ಕರಾಳ ದಿನ ಎಂದು ಆಚರಣೆ ಮಾಡುವ ಮೂಲಕ ಪ್ರತಿಭಟಿಸಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಅಪವಿತ್ರ ಮೈತ್ರಿ ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ದಾವಣಗೆರೆ ನಗರದಲ್ಲೂ ಇಂದು ಬಿಜೆಪಿಯಿಂದ ಕರಾಳ ದಿನಾಚರಣೆ ನಡೆಸಿದ್ದಾರೆ. ಮೈತ್ರಿ ಸರ್ಕಾರ ರಚನೆಯನ್ನು ಖಂಡಿಸಿ ಜನಮತ ವಿರೋಧಿ ದಿನ ಆಚರಿಸಿದ್ದಾರೆ. ಬಿಜೆಪಿ ಜಿಲ್ಲಾ ಘಟಕದಿಂದ ದಾವಣಗೆರೆ ಗಾಂಧಿ ವೃತ್ತದಲ್ಲಿ ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ್, ಮಾಜಿ ಸಚಿವ ಎಸ್.ಎ ರವೀಂದ್ರನಾಥ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.

ವಿಜಯಪುರದಲ್ಲಿ ಬಿಜೆಪಿ ವತಿಯಿಂದ ಜನಮತ ವಿರೋಧಿ ದಿನ ಆಚರಣೆ ಮಾಡಲಾಗಿದ್ದು, ನಗರದ ಗಾಂಧಿ ಚೌಕ್ ನಲ್ಲಿ ಪ್ರತಿಭಟಿಸಿದ್ದಾರೆ. ಕಪ್ಪು ಧ್ವಜ ಹಿಡಿದು, ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

congress-JDS g m siddeshwara ಘೋಷಣೆ ಕಪ್ಪು ಧ್ವಜ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ