ಹೆಚ್ಡಿಕೆ-ಪರಂ ಪ್ರಮಾಣ ವಚನ ಸ್ವೀಕಾರ

H.D.Kumaraswamy as cm and parameshwar as DCM took oath

23-05-2018

ಬೆಂಗಳೂರು: ದೇವರು ಮತ್ತು ಕನ್ನಡ ನಾಡಿನ ಜನರ ಹೆಸರಿನಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ವಿಧಾನಸಭೆ ಚುನಾವಣೆಯ ನಂತರ ಹಲವಾರು ಗೊಂದಲಗಳಿಗೆ ತರೆ ಎಳೆದಂತಾಗಿದೆ. ಸರಿಯಾಗಿ ಸಂಜೆ 4.30 ವಿಧಾನಸೌಧದ ಮುಂಭಾಗ ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಪ್ರಮಾಣ ವಚನ ಬೋಧಿಸಿದರು. ಪ್ರಮಾಣವಚನ ಸ್ವೀಕರಿಸಿದ ನಂತರ ಕುಮಾರಸ್ವಾಮಿ ತಾಯಿ ಚೆನ್ನಮ್ಮ ಅವರ ಪಾದಕ್ಕೆ ನಮಸ್ಕರಿಸಿ, ಆಶೀರ್ವಾದ ಪಡೆದುಕೊಂಡರು.

ಇದೇ ವೇದಿಕೆಯಲ್ಲಿ ಕೊರಟಗೆರೆ ಶಾಸಕ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ದೇವರ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸೋನಿಯಾ ಗಾಂಧಿ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು. ವಿವಿಧ ರಾಜ್ಯಗಳ ತೃತೀಯ ರಂಗದ ನಾಯಕರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದರ ನಡುವೆ ಪ್ರಮಾಣ ವಚನಕ್ಕೂ ಮುನ್ನ ನಗರದಲ್ಲಿ ಭಾರೀ ಮಳೆಯಾಗಿದ್ದು ವಿಧಾನಸೌಧದ ಬಳಿ ನೆರೆದಿದ್ದ ಕಾರ್ಯಕರ್ತರಿಗೆ ಕಿರಿಕಿರಿ ಉಂಟಾಗಿತ್ತು. ನಿಲ್ಲಲೂ ಆಗದೆ ಪರದಾಡಬೇಕಾಯಿತು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ