ಕೆ.ಸಿ ಕೊಂಡಯ್ಯಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ!

weaver

23-05-2018

ಬಳ್ಳಾರಿ: ವಿಧಾನ ಪರಿಷತ್ ಸದಸ್ಯ ಕೆ.ಸಿ‌.ಕೊಂಡಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ನೇಕಾರರ ಒಕ್ಕೂಟ ಒತ್ತಾಯಿಸಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನೇಕಾರರ ಒಕ್ಕೂಟದ ಮುಖಂಡರು, ಕೆ.ಸಿ‌.ಕೊಂಡಯ್ಯ ಕಾಂಗ್ರೆಸ್ ಹಿರಿಯ ಮುಖಂಡರಾಗಿ ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಅಲ್ಲದೇ ರಾಜ್ಯದ ನಾನಾ ಭಾಗಗಳಲ್ಲಿ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಸಾಕಷ್ಟು ಶ್ರಮಿಸಿದ್ದಾರೆ. ಅಭ್ಯರ್ಥಿಗಳ ಗೆಲುವಿಗೆ ದುಡಿದಿದ್ದಾರೆ. ಆದ್ದರಿಂದ, ಈ ಮೂಲಕ ಕೆ.ಸಿ ಕೊಂಡಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸುತ್ತಿದ್ದು, ಸಚಿವ ಸ್ಥಾನ ನೀಡುವಂತೆ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯುತ್ತೇವೆ, ಇದು ನಾನಾ ಜಿಲ್ಲೆಗಳ ನೇಕಾರರ ಒತ್ತಾಯವೂ ಆಗಿದೆ ಎಂದರು.


ಸಂಬಂಧಿತ ಟ್ಯಾಗ್ಗಳು

K. C. Kondaiah minister ನೇಕಾರ ಒಕ್ಕೂಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ