ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು

Neglect of gram panchayat: A man died!

24-05-2018

ಬಳ್ಳಾರಿ: ಗ್ರಾಮ ಪಂಚಾಯತಿ ನಿರ್ಲಕ್ಷ್ಯದಿಂದ ವಿದ್ಯುತ್ ಹರಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬ್ಯಾಲಕುಂದಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪಂಪ್ ಹೌಸ್ ಬಳಿ ತೆರಳಿದ್ದ ಮಂಜುನಾಥ(38) ಎಂಬುವರಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ತೀವ್ರವಾಗಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಗ್ರಾಮ ಪಂಚಾಯತಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ದೂರಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

grama panchayath electric shock ಪ್ರಕರಣ ಗ್ರಾಮಸ್ಥ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ