ಭದ್ರತಾ ವೈಫಲ್ಯ: ಮಾಹಿತಿ ಕೇಳಿದ ಸಿಎಂ ಕುಮಾರಸ್ವಾಮಿ

Security Failure: CM asked information with DGP

24-05-2018

ಬೆಂಗಳೂರು: ನಿನ್ನೆ ಹೆಚ್.ಡಿ ಕುಮಾರ ಸ್ವಾಮಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟ್ರಾಫಿಕ್ ನಿಂದ ಕಿರಿಕಿರಿ ಅನುಭವಿಸಿದ್ದರು. ವಿಧಾನಸೌಧದ ಸುತ್ತಮುತ್ತ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿ ಚಾಲುಕ್ಯ ಸರ್ಕಲ್ ನಿಂದ ಕಾಲ್ನಡಿಗೆಯಲ್ಲಿಯೇ ವಿಧಾನಸೌಧದಲ್ಲಿನ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬಳಿಕ ಪ್ರೋಟೊಕಾಲ್ ಅಧಿಕಾರಿ ಮತ್ತು ಮಾಜಿ ಪ್ರಧಾನಿ ದೇವೇಗೌಡರ ಎದುರು ಭದ್ರತಾ ವೈಫಲ್ಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ನಗರ ಪೊಲೀಸ್ ಆಯುಕ್ತರ ವಿರುದ್ಧ ಅಸಮಾಧಾನವನ್ನೂ ಹೊರಹಾಕಿದ್ದರು. ಇದೆಲ್ಲದರ ಕುರಿತು ಸಿಎಂ ಕುಮಾರಸ್ವಾಮಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಂದ ಮಾಹಿತಿ ಕೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ