‘ಸಾಲಮನ್ನಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬಾರದು’24-05-2018

'ರೈತರ ಸಾಲಮನ್ನಾ ವಿಚಾರವಾಗಿ ಸುಳ್ಳು ಸುದ್ದಿ ಹಬ್ಬಿಸಬಾರದು' ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಪರವಾಗಿ ಕೆಲಸ ಮಾಡುತ್ತಾರೆ. ರೈತರ ಸಾಲಮನ್ನಾ ವಿಚಾರದಲ್ಲಿ ಹಿಂದೆ ಉಳಿದಿಲ್ಲ. ಸ್ಪಷ್ಟ ಬಹುಮತ ಕೊಟ್ಟಿದ್ದರೆ ಏಕಪಕ್ಷೀಯವಾಗಿ ಸಾಲಮನ್ನಾ ಮಾಡಲಾಗುತ್ತಿತ್ತು. ಆದರೆ, ಈಗ ಸಮ್ಮಿಶ್ರ ಸರ್ಕಾರವಾಗಿರುವುದರಿಂದ ಎರಡೂ ಪಕ್ಷದ ಮುಖಂಡರು ಕುಳಿತು ಚರ್ಚಿಸಿ ನಿರ್ಣಯ ಕೈಗೊಳ್ಳುತ್ತಾರೆ ಎಂದರು. ಮುಂದಿನ ದಿನಗಳಲ್ಲಿ ಮತ್ತಷ್ಟು ಪಕ್ಷ ಸಂಘಟನೆ ಮಾಡುವುದಾಗಿ ಹೇಳಿದ ಪ್ರಜ್ವಲ್, ಮಠಾಧೀಶರ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Prajwal revanna loan waiver ಕಾರ್ಯದರ್ಶಿ ನಿರ್ಣಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ