‘ಟೀಕೆಯಲ್ಲೇ ಕಾಲ ಕಳೆಯಬಾರದು’ ಬಿಜೆಪಿಗೆ ಟಾಂಗ್!

"Do not spend time in criticism" said CM kumaraswamy

24-05-2018

ಬೆಂಗಳೂರು: ನಿನ್ನೆಯಷ್ಟೇ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿಯನ್ನ ಮುಂದುವರೆಸಿದ್ದು, ಬಿಜೆಪಿ ನಾಯಕರು ನಮ್ಮನ್ನ ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಕಿಡಿ ಕಾರಿದರು.

ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಪಟ್ಟನಾಯಕನಹಳ್ಳಿ ನಂಜಾವಧೂತ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಮುಖ್ಯಮಂತ್ರಿ ಕುಮಾರಸ್ವಾಮಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ‘ಬಿಜೆಪಿ ನಾಯಕರು ನಮ್ಮ ಮೇಲೆ ಟೀಕೆ ಮಾಡುವುದನ್ನು ಬಿಡಬೇಕು, ಅದರಲ್ಲೇ ಕಾಲ ಕಳೆಯಬಾರದು’ ಎಂದು ಟಾಂಗ್ ನೀಡಿದ್ದಾರೆ.

ಇನ್ನು ಸಾಲಮನ್ನಾ ಬಗ್ಗೆ ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ. ಈ ಬಗ್ಗೆ ಅನುಮಾನ ಬೇಡ ಎಂದರು. ಪ್ರತಿಜ್ಞಾ ವಿಧಿ ಕಾರ್ಯಕ್ರಮದ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುವುದಾಗಿಯೂ ತಿಳಿಸಿದರು.

 


ಸಂಬಂಧಿತ ಟ್ಯಾಗ್ಗಳು

H.D kumaraswamy Security ನಾಯಕ ಅನುಮಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ