ಮೈಸೂರಲ್ಲಿ ಪತ್ನಿ ಮತ್ತು ಮಗಳ ಭಯಾನಕ ಹತ್ಯೆ!

Wife and daughter

25-05-2018

ಮೈಸೂರು: ಪತ್ನಿ ಹಾಗೂ ಮಗಳ ಕತ್ತು ಕೊಯ್ದು ಭೀಕರ ಹತ್ಯೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರಿನ ವಿಜಯನಗರದಲ್ಲಿ ನಡೆದಿದೆ. ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ಪ್ರಜ್ವಲ್(45) ಎಂಬುವರು ಈ ಕೃತ್ಯ ಎಸಗಿದ್ದಾರೆ. ಪತ್ನಿ ಆವಿಯ (39) ಮಗಳು ಸಿಂಚನ (11)ಮೃತ ದುರ್ದೈವಿಗಳು.

ದಂಪತಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ಗಳಾಗಿದ್ದರು. ಮೊನ್ನೆ ರಾತ್ರಿ ಪತ್ನಿ ಹಾಗೂ ಮಗಳ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಪ್ರಜ್ವಲ್. ಕೃತ್ಯವೆಸಗಿ ಒಂದು ರಾತ್ರಿ ಮೃತದೇಹಗಳ ಬಳಿ ಕಾಲ ಕಳೆದು, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Murder Mysore ಪೊಲೀಸರು ಪರಿಶೀಲನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ