ಯಾವುದೇ ತನಿಖೆಯನ್ನು ಬಾಕಿ ಉಳಿಸುವ ಪ್ರಶ್ನೆಯೇ ಇಲ್ಲ ಲೋಕಾಯುಕ್ತ ನ್ಯಾಯಮೂರ್ತಿ !

Kannada News

24-05-2017

ಬೆಂಗಳೂರು:- ಲೋಕಾಯುಕ್ತದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ದೂರುಗಳ ತನಿಖೆ ಸೇರಿದಂತೆ ಯಾವುದೇ ತನಿಖೆಯನ್ನು ಬಾಕಿ ಉಳಿಸುವ ಪ್ರಶ್ನೆಯೇ ಇಲ್ಲ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿವೆ. ಎಲ್ಲವನ್ನೂ ನಿಯಮಗಳ ಪ್ರಕಾರ ಕೈಗೆತ್ತಿಕೊಂಡು ವಿಲೇವಾರಿ ಮಾಡಲಾಗುವುದು. ಇದರಲ್ಲಿ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ತಿಳಿಸಿದರು.ಒಂದೂವರೆ ವರ್ಷದಿಂದ ಲೋಕಾಯುಕ್ತ ಹುದ್ದೆ ಖಾಲಿ ಇತ್ತು. ಹಿಗಾಗಿ ಸಾವಿರಾರು ದೂರುಗಳು ವಿಲೇವಾರಿ ಆಗಿಲ್ಲ. ಎಲ್ಲಾ ಪ್ರಕರಣಗಳ ತನಿಖೆ ನಡೆಯುತ್ತಿದ್ದು, ಅಧಿಕಾರಿಗಳ ಬಳಿ ಪ್ರಕರಣಗಳ ದಾಖಲೆಗಳಿವೆ. ಎಲ್ಲವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಮುಖ್ಯಮಂತ್ರಿ ಆಪ್ತರು ಅಥವಾ ಗಣ್ಯ ವ್ಯಕ್ತಿಗಳು ಎಂಬುದು ಇಲ್ಲಿ ಗಣನೆಗೆ ಬರುವುದಿಲ್ಲ. ಅಗತ್ಯ ದಾಖಲೆ ಸಾಕ್ಷ್ಯಾಧಾರ ಮತ್ತು ದಾಖಲೆಗಳನ್ನು ಇಟ್ಟುಕೊಂಡು ತನಿಖೆ ಮಾಡಬೇಕಾಗಿರುವುದರಿಂದ ತ್ವರಿತಗತಿಯಲ್ಲಿ ಕೇಸ್‌ಗಳನ್ನು ತನಿಖೆ ಮಾಡಲು ಸಾಧ್ಯವಿಲ್ಲ. ಎಲ್ಲವೂ ನಿಯಮಗಳ ಪ್ರಕಾರ ನಡೆಯುತ್ತದೆ.ನಾನು ನ್ಯಾಯಾಮೂರ್ತಿಯಾಗಿ ಸೇವೆ ಸಲ್ಲಿಸಿದ್ದೇನೆ. ನನ್ನ ಅಧೀನದಲ್ಲಿ ಹಿರಿಯ ಅಧಿಕಾರಿಗಳು ಇದ್ದಾರೆ. ಉಳಿದಿರುವ ಎಲ್ಲಾ ಪ್ರಕರಣಗಳನ್ನು ಆದಷ್ಟು ಬೇಗ ಇತ್ಯರ್ಥ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
 


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ