ಸಿಎಂ ಕುಮಾರಸ್ವಾಮಿಗೆ ಸಭಾಧ್ಯಕ್ಷರ ಸಲಹೆ

speaker K.R.Ramesh Kumar

25-05-2018

ಬೆಂಗಳೂರು: ಚುನಾವಣಾ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸುವ ಧಾವಂತದಲ್ಲಿ ಆರ್ಥಿಕ ಶಿಸ್ತಿಗೆ ಧಕ್ಕೆ ತರುವ ಕೆಲಸ ಮಾಡುವುದು ಸೂಕ್ತವಲ್ಲ. ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವ ಸಲುವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಪಡೆದು ನಿರ್ಧಾರ ಕೈಗೊಳ್ಳುವಂತೆ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ವಿಧಾನಸಭೆಯಲ್ಲಿಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿ ಅವರಿಗೆ ಸಲಹೆ ಮಾಡಿದ್ದಾರೆ.

ವಿಶ್ವಾಸ ಮತಗೊತ್ತುವಳಿಯನ್ನು ಮತಕ್ಕೆ ಹಾಕುವ ಮುನ್ನ ಸರ್ಕಾರಕ್ಕೆ ಸಲಹೆ ಮಾಡಿದ ರಮೇಶ್ ಕುಮಾರ್, ಸಿದ್ದರಾಮಯ್ಯ ಇಡೀ ದೇಶದಲ್ಲಿಯೇ ಅತ್ಯಂತ ಉತ್ತಮ ಆರ್ಥಿಕ ಸಚಿವರಾಗಿದ್ದರು. ಪಶ್ಚಿಮ ಬಂಗಾಳದ ಅಶೋಕ್ ಮಿತ್ರಾ ಅವರನ್ನು ಹೊರತುಪಡಿಸಿದರೆ ಸಿದ್ದರಾಮಯ್ಯ ಅವರು ಉತ್ತಮವಾಗಿ ಹಣಕಾಸು ಇಲಾಖೆಯನ್ನು ನಿರ್ವಹಣೆ ಮಾಡಿದ್ದಾರೆ. ಅವರ ಮಾರ್ಗದರ್ಶನ ನಿಮಗೆ ಅಗತ್ಯವಾಗಿದೆ ಎಂದರು. ಸಂಪನ್ಮೂಲದ ಇತಿ ಮಿತಿಯೊಳಗೆ ಆಶ್ವಾಸನೆಗಳನ್ನು ಈಡೇರಿಸುವ ಕೆಲಸ ಮಾಡುವುದು ಒಳ್ಳೆಯದು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಭವ ನಿಮ್ಮ ಆಡಳಿತದ ನೆರವಿಗೆ ಬರಲಿದೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

H.D.Kumaraswamy K.R.Ramesh Kumar ಇತಿ ಮಿತಿ ಆಶ್ವಾಸನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ