ಬಹುಮತ ಗೆದ್ದಾಯಿತು ಈಗ ಸಂಪುಟ ವಿಸ್ತರಣೆ ಕಸರತ್ತು

Cm kumaraswamy: congress-jds and cabinet

26-05-2018

ಬೆಂಗಳೂರು: ಸಿಎಂ ಕುಮಾರಸ್ವಾಮಿ ಬುಹುಮತ ಸಾಬೀತು ಪಡಿಸುವ ಅಗ್ನಿ ಪರೀಕ್ಷೆಯಲ್ಲಿ ಗೆದ್ದ ಬೆನ್ನಲ್ಲೇ ಮೈತ್ರಿ ಸರ್ಕಾರದಲ್ಲಿ ಸಂಪುಟ ವಿಸ್ತರಣೆಗೆ ಕಸರತ್ತು ನಡೆಸಬೇಕಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯೇನು ಕಡಿಮೆ ಇಲ್ಲ. ಇವೆಲ್ಲವನ್ನು ಇವೆಲ್ಲವನ್ನು ಕುಮಾರಸ್ವಾಮಿ ನಿಭಾಯಿಸಬೇಕಾಗಿದೆ. ರಾಜರಾಜೇಶ್ವರಿ ನಗರ ಕ್ಷೇತ್ರದ ಮತದಾನದ ಬಳಿಕ ಸಂಪುಟ ವಿಸ್ತರಣೆಗೆ ಕೈಹಾಕಲಿದ್ದಾರೆ ಎಂದು ತಿಳಿದು ಬಂದಿದೆ. ಸಂಪುಟ ರಚನೆ ಬಳಿಕ ಮುಂದಿನ ವಾರ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈಗಾಗಲೆ ನಿರ್ಧರಿಸಿದ್ದ ಮೈತ್ರಿ ಸರ್ಕಾರದ ಪ್ರಮುಖರ ದೆಹಲಿ ಭೇಟಿಯನ್ನು ಮುಂದೂಡಲಾಗಿದೆ. ಸೋಮವಾರ ಸಂಜೆ ಅಥವಾ ಮಂಗಳವಾರ ಬೆಳಿಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ದೆಹಲಿಗೆ ತೆರಳಿದ್ದಾರೆ. ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾರ್, ಡಿಸಿಎಂ ಪರಮೇಶ್ವರ್ ದೆಹಲಿಗೆ ತೆರಳಿದ್ದಾರೆ.

22:12ರ ಖಾತೆ ಹಂಚಿಕೆ ಸೂತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಮುಂದಿಡಲಿರುವ ನಾಯಕರು, ಕಾಂಗ್ರೆಸ್ ಗೆ ಯಾವ್ಯಾವ ಖಾತೆಗಳು, ಜೆಡಿಎಸ್ ಗೆ ಯಾವ್ಯಾವ ಖಾತೆಗಳೆಂದು ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನ ನಡೆಯಲಿದೆ.


ಸಂಬಂಧಿತ ಟ್ಯಾಗ್ಗಳು

H.D.Kumaraswamy cabinet ತೀರ್ಮಾನ ಡಿಸಿಎಂ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ