'ಪೆಟ್ರೋಲ್ ಬೆಲೆ ಏರಿಕೆಯಾದಾಗ ನೀವ್ಯಾಕೆ ಪ್ರತಿಭಟಿಸಲ್ಲಿ’?26-05-2018

ಮಂಗಳೂರು: ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸಮತದ ಗೆಲುವು ಸಂವಿಧಾನದ ಗೆಲುವು ಎಂದು ಮಂಗಳೂರಲ್ಲಿ ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಚಿವ ಸ್ಥಾನ ಹೈ ಕಮಾಂಡ್ ಗೆ ಬಿಟ್ಟ ವಿಚಾರ, ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ನಾನು ಬದ್ಧ ಎಂದರು. ಇವಿಎಂ ಯಂತ್ರದ ಬಗ್ಗೆ ಇರುವ ಅನುಮಾನದ ಬಗ್ಗೆ ಯಾವುದೇ ದಾಖಲೆ ಇಲ್ಲ. ಆದರೆ,  ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಚುನಾವಣಾ ಆಯೋಗ ಸಂಶಯ ಬಗೆಹರಿಸಬೇಕು ಎಂದರು.

ಸಾಲಮನ್ನಾ ಮಾಡದಿದ್ದರೆ ರಾಜ್ಯ ಬಂದ್ ಗೆ ಬಿಎಸ್ವೈ ಕರೆ ನೀಡುತ್ತೇವೆ ಎಂದಿರುವುದರ ಬಗ್ಗೆ ಪ್ರತಿಕ್ರಿಯಿಸಿ, ಸಚಿವ ಸಂಪುಟ ರಚನೆಯಾಗಿಲ್ಲ ಇಂತಹ ಸಂದರ್ಭದಲ್ಲಿ ಬಂದ್ ಗೆ ಕರೆ ಕೊಟ್ಟರೆ ಹೇಗೆ? ಅದೇ ಪೆಟ್ರೋಲ್ ಬೆಲೆ ಏರಿಕೆಯಾದರೆ ಯಾಕೆ ನೀವು ಪ್ರತಿಭಟನೆ ಮಾಡಲ್ಲ ಎಂದು ಸೂಕ್ಷ್ಮವಾಗಿ ಪ್ರಶ್ನಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

U.T Khader high command ಸೂಕ್ಷ್ಮ ಪೆಟ್ರೋಲ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ