ಕಚೇರಿಗೆ ಬೀಗ ಜಡಿದು ನೌಕರರ ಪ್ರತಿಭಟನೆ

contract Employees protest against social welfare office at gulbarga

26-05-2018

ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ನೇಮಿಸಿಕೊಂಡಿರುವ ನೌಕರರನ್ನು ಕೆಲಸದಿಂದ ತೆಗೆದು ಹಾಕಿರುವ ಕ್ರಮ ಖಂಡಿಸಿ ಕಲಬುರಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗೆ ಬೀಗ ಜಡಿದು ನೌಕರರು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ರಾಜ್ಯ ಹಾಸ್ಟೆಲ್ ಮತ್ತು ವಸತಿ ಶಾಲೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೌಕರರನ್ನು ನೇಮಿಸಿಕೊಳ್ಳಲಾಗಿತ್ತು. ಆದರೆ ಏಕಾಏಕಿ ಕಾರ್ಮಿಕರನ್ನು ಕೆಲಸದಿಂದ ಕಿತ್ತುಹಾಕಲಾಗಿದೆ. ಈ ಕ್ರಮವನ್ನು ಖಂಡಿಸಿ ಗುತ್ತಿಗೆ ನೌಕರರು ಕಳೆದ ನಾಲ್ಕುದಿನಗಳಿಂದ ಪ್ರತಿಭಟಿಸುತ್ತಿದ್ದಾರೆ. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಎದುರು ಧರಣಿ ಕೂತಿರುವ ನೌಕರರು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿಕೊಂಡರು. ಕೆಲಸದಿಂದ ತೆಗೆದು ಹಾಕಿರುವ ನೌಕರರನ್ನು ವಾಪಸ್ಸು ಕರೆಸಿಳ್ಳುವಂತೆ ಆಗ್ರಹಿಸಿದ್ದಾರೆ. ತಮ್ಮ ಸಮಸ್ಯೆಗೆ ಪರಿಹಾರ ಸಿಗದ ಹಿನ್ನೆಲೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

contract labourers social welfare ಕಾರ್ಮಿಕ ಇಲಾಖೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ