ಮೂವರು ಪೊಲೀಸ್ ಪೇದೆಗಳ ಅಮಾನತು

Belagavi: 3 police constables suspended

26-05-2018

ಬೆಳಗಾವಿ: ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮೂವರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಿ, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ. ಜಿಲ್ಲೆಯ ಗೋಕಾಕ ಗ್ರಾಮೀಣ ಠಾಣೆಯ ಪೇದೆ ಮನೋಹರ ಗೋನಿ, ಲಕ್ಷ್ಮಣ ದೇವರ ಮತ್ತು ರಾಮದುರ್ಗ ಪಟ್ಟಣ ಠಾಣೆಯ ಸತೀಶ್ ಅಮಾನತುಗೊಂಡ ಪೇದೆಗಳು. ಮರಳು ಸಾಗಣೆ ಮತ್ತು ಆರ್ಥಿಕ ವ್ಯವಹಾರದಲ್ಲಿ ಹಣ ಪಡೆದಿದ್ದಾರೆ ಎಂಬ ಆರೋಪ ಹಿನ್ನೆಲೆ ಅಮಾನತು ಮಾಡಲಾಗಿದೆ ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

police Constable suspend ವ್ಯವಹಾರ ಅಮಾನತು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ