ದೆಹಲಿಗೂ ಮುನ್ನ ಕೈ ನಾಯಕರೊಂದಿಗೆ ಸಿಎಂ ಸಭೆ

congress leaders one more meeting with CM kumaraswamy

26-05-2018

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ ‘ನಾನು ಮೊದಲಿಗೆ ಪ್ರಧಾನ ಮಂತ್ರಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರು, ದೇಶದ ಜನತೆಗೆ ಭಾರೀ ಭರವಸೆಗಳನ್ನು ನೀಡಿದ್ದರು, ದೊಡ್ಡ ದೊಡ್ಡ ವಿಚಾರಗಳ ಕುರಿತಾಗಿ ಚರ್ಚೆ ನಡೆಸಿದ್ದರು. ಆದರೆ, ಸೂಕ್ತವಾಗಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿಲ್ಲ, ಮುಂದೆ ಈ ಕುರಿತು ಜನರೇ ನಿರ್ಧರಿಸುತ್ತಾರೆ’ ಎಂದರು.  

ಸಿಎಂ ಕುಮಾರಸ್ವಾಮಿಗೆ ರಾಜ್ಯ ಸಂಪುಟ ರಚನೆ ತಲೆನೋವಾಗಿ ಪರಿಣಮಿಸಿದ್ಯಾ? ಎಂಬ ಗುಸುಗುಸು ಕೇಳಿ ಬರುತ್ತಿದೆ. ಈ ಕುರಿತಂತೆ ಸಿಎಂ ಜೊತೆಗೆ ಕೈ ನಾಯಕರು ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಇನ್ನೊಂದು ಸುತ್ತಿನ ಚರ್ಚೆ ನಡೆಸಲಿದ್ದಾರೆ. ಇಂದು ಸಂಪೂರ್ಣ ವಿಶ್ರಾಂತಿ ಪಡೆಯುವುದಾಗಿ ಹೇಳಿದ್ದ ಸಿಎಂ, ದಿಢೀರ್ ಕಾರ್ಯಪ್ರವೃತ್ತರಾಗಿದ್ದಾರೆ.

ಮಕ್ಕಳ ಕಳ್ಳರ ವಿಚಾರವಾಗಿ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ. ಮಕ್ಕಳ ಕಳ್ಳರು ಎಂದು ಹಲ್ಲೆ ಮಾಡಿದವರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ. ನಿಫಾ ವಿಚಾರವಾಗಿಯೂ ಜನರು ಭಯ ಬೀಳುವ ಅಗತ್ಯವಿಲ್ಲ. ಆರೋಗ್ಯ ಇಲಾಖೆ ಅಧಿಕಾರಿಗಳು ಮುಂಜಾಗೃತಾ ಕ್ರಮ ತೆಗೆದುಕೊಳ್ಳಿ, ನಿಫಾ ಬಗ್ಗೆ ಜಾಗೃತಿ ಮೂಡಿಸಿ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.


ಸಂಬಂಧಿತ ಟ್ಯಾಗ್ಗಳು

H.D.Kumaraswamy Narendra Modi ದಿಢೀರ್ ಜಾಗೃತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ