ಮಾಜಿ ಸಚಿವ ಎಚ್.ವೈ. ಮೇಟಿಗೆ ಕ್ಲೀನ್‌ ಚಿಟ್ !

Kannada News

24-05-2017

ಬೆಂಗಳೂರು:- ಮಹಿಳೆಯೊಂದಿಗಿನ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ವೈ. ಮೇಟಿ ಅವರಿಗೆ ಕ್ಲೀನ್‌ಚಿಟ್ ನೀಡಿರುವ ಸಿಐಡಿ ಅಧಿಕಾರಿಗಳು ಈ ಸಂಬಂಧದ ವರದಿಯನ್ನು ಗೃಹ ಇಲಾಖೆಗೆ ಸಲ್ಲಿಸಿದ್ದಾರೆ.
ಮಹಿಳೆಯ ಮೇಲಿನ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ನಿರೀಕ್ಷೆಯಂತೆ ಮೇಟಿ ಅವರನ್ನು ದೋಷ ಮುಕ್ತಗೊಳಿಸಿ ವರದಿಯನ್ನು ಗೃಹ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.
ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಟಿ ಅವರ ವಿರುದ್ಧ ಸಂತ್ರಸ್ಥ ಮಹಿಳೆಯಿಂದಾಗಲಿ, ಮತ್ಯಾರಿಂದಾಗಲಿ ಸಹ ದೂರು ನೀಡಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಿದ ವಿಚಾರಣೆಯಲ್ಲಿ ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಮೇಟಿ ಅವರಿಗೆ ಕ್ಲೀನ್ಚಿಟ್ ನೀಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ