‘ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿಲ್ಲ’- ಎಸ್.ಆರ್.ಪಾಟೀಲ್

"Not lobbying for ministerial position" - SR Patil

26-05-2018

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಇನ್ನೇನು ಸಚಿವ ಸಂಪುಟ ರಚನೆ ಮಾಡಬೇಕು ಇದರ ಬೆನ್ನಲ್ಲೇ ಹಲವು ನಾಯಕರು ತನ್ನ ಸಚಿವ ಸ್ಥಾನದ ಆಕಾಂಕ್ಷೆಯನ್ನು ಹೊರಹಾಕುತ್ತಿದ್ದಾರೆ. ಇದರ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್ ಆರ್ ಪಾಟೀಲ್ ಹೇಳಿಕೆ ನೀಡಿ, ಸಚಿವ ಸ್ಥಾನ ಕೊಟ್ಟರೆ ಉತ್ತಮವಾಗಿ ಕೆಲಸ ಮಾಡುವೆ. ಈ ಹಿಂದೆ ಸಚಿವನಾಗಿ ಕೆಲಸ ಮಾಡಿದ್ದೀನಿ, ನಾನೇನು ಸನ್ಯಾಸಿ ಅಲ್ಲ ಎಂದಿದ್ದಾರೆ. ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿಲ್ಲ, ಪಕ್ಷ ಮತ್ತೊಮ್ಮೆ ಅವಕಾಶ ಕೊಟ್ಟರೆ ಉತ್ತಮವಾಗಿ ಕೆಲಸ ನಿರ್ವಹಿಸುವೆ ಎಂದರು.


ಸಂಬಂಧಿತ ಟ್ಯಾಗ್ಗಳು

S. R. Patil congress ಜವಾಬ್ದಾರಿ ರಾಜೀನಾಮೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ