ಆರ್.ಆರ್.ನಗರ ಮತದಾನ: ಆಯೋಗದ ಹದ್ದಿನ ಕಣ್ಣು

RR nagar election: police high protection

28-05-2018

ಬೆಂಗಳೂರು: ಆರ್.ಆರ್.ನಗರ ಮತ ಕ್ಷೇತ್ರದ 421 ಮತಗಟ್ಟೆಗಳಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಕ್ಷೇತ್ರದ ಜನತೆ ಸರತಿ ಸಾಲಲ್ಲಿ ನಿಂತು ಮತ ಹಕ್ಕು ಚಲಾಯಿಸುತ್ತಿದ್ದಾರೆ. ಒಟ್ಟು 421 ಮತಗಟ್ಟೆಗಳಲ್ಲಿ 4 ಕ್ಲಿಷ್ಟಕರ, 47 ಅತಿ ಸೂಕ್ಷ್ಮ, 186 ಸೂಕ್ಷ್ಮ ಹಾಗೂ 184 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ.

ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ನಿಂದ ತಲಾ ಒಬ್ಬರು ಹಾಗೂ ಇತರೆ ಪಕ್ಷದಿಂದ 7, ಪಕ್ಷೇತರ ನಾಲ್ವರು ಅಭ್ಯರ್ಥಿಗಳು ಸೇರಿ ಒಟ್ಟು 14 ಮಂದಿ ಕಣದಲ್ಲಿದ್ದಾರೆ. ಮತದಾನ ಅಕ್ರಮ ನಡೆಯದಂತೆ ಕ್ಷೇತ್ರದಲ್ಲಿ ನಾಲ್ವರು ಅಧಿಕಾರಿಗಳನ್ನು ವೀಕ್ಷರನ್ನಾಗಿ ನೇಮಿಸಲಾಗಿದೆ. 2,524 ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಚುನಾವಣೆಯಲ್ಲಿ ಎಂ-3 ಮಾದರಿಯ ಇವಿಎಂ ಮತ್ತು ವಿವಿ ಪ್ಯಾಟ್ ಬಳಸಲಾಗಿದೆ. ಈ ಕ್ಷೇತ್ರದಲ್ಲಿ ನಾಲ್ಕು ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ ಮಹಿಳಾ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆರ್.ಆರ್.ನಗರ ಕ್ಷೇತ್ರದಲ್ಲಿ ಈವರೆಗೆ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ 7 ಪ್ರಕರಣಗಳು ದಾಖಲಾಗಿವೆ. ಕ್ಷೇತ್ರದಲ್ಲಿ ಅಹಿತಕರ ಘಟನೆ ನಡೆಯದಂತೆ ಉತ್ತರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋಡ್, ಪಶ್ಚಿಮ ವಿಭಾಗ ಡಿಸಿಪಿ ರವಿ ಡಿ.ಚನ್ನಣ್ಣನವರ್ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಅತಿಸೂಕ್ಷ್ಮ 20 ಮತಗಟ್ಟೆಗಳಲ್ಲಿ ವೆಬ್‌ ಕಾಸ್ಟಿಂಗ್, 31 ಮತಗಟ್ಟೆಗಳಲ್ಲಿ ವೀಡಿಯೋ ಚಿತ್ರೀಕರಣ ವ್ಯವಸ್ಥೆ ಇದೆ.


ಸಂಬಂಧಿತ ಟ್ಯಾಗ್ಗಳು

RR nagar election ಚಿತ್ರೀಕರಣ ಮತಗಟ್ಟೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ