ಬೀದರ್ ನಲ್ಲಿ ಒತ್ತಾಯ ಪೂರ್ವಕ ಬಂದ್!

BJP workers forcefully compelled to bandh at bidar!

28-05-2018

ಬೀದರ್: ರಾಜ್ಯ ರೈತರ ಸಾಲಮನ್ನಾಗೆ ಆಗ್ರಹಿಸಿ ಕರ್ನಾಟಕ ಬಂದ್ ಹಿನ್ನೆಲೆ, ಬೀದರ್ ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಸಂಸದ ಭಗವಂತ ಖೂಬಾರವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇನ್ನು ಬಿಜೆಪಿ ಕಾರ್ಯಕರ್ತರು ಒತ್ತಾಯ ಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ, ಎಂಬ ಮಾತುಗಳು ಕೇಳಿ ಬರುತ್ತಿವೆ. ಅಂಬೇಡ್ಕರ್ ಸರ್ಕಲ್ ನಿಂದ ಕೇಂದ್ರ ಬಸ್ ನಿಲ್ದಾಣ ಬಳಿ ತೆರಳಿದ ಸಂಸದ ಭಗವಂತ ಖೂಬಾ, ಜಿಲ್ಲಾಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಸೇರಿ ಸಾರಿಗೆ ಬಸ್ ತಡೆದು ಪ್ರತಿಭಟಿಸಿದ್ದಾರೆ. ಇದೇ ವೇಳೆ  ಕೂಡಲೆ ರೈತರ ಸಾಲಮನ್ನಾ ಮಾಡುವಂತೆ ಕೂಡಲೆ ಆಗ್ರಹಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bhagwanth khuba MP ಅಂಗಡಿ ಸರ್ಕಲ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ