ಬೆಳಗಾವಿಗೆ ಮಹಾರಾಷ್ಟ್ರದ ಸಚಿವರ ನಿಷೇಧ !

Kannada News

25-05-2017

ಬೆಳಗಾವಿ:-ಬೆಳಗಾವಿಯಲ್ಲಿ ಎಂಇಎಸ್ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಘೋಷಣೆ ಮಾಡಿದ್ದ ಮಹಾರಾಷ್ಟ್ರದ ಸಚಿವರಿಗೆ ಜಿಲ್ಲಾಧಿಕಾರಿ ಎನ್.ಜಯರಾಂ ಶಾಕ್ ನೀಡಿದ್ದಾರೆ. ಕಳೆದ ಕೆಲ ದಿನಗಳಿಂದ ಎಂಇಎಸ್ ಕ್ಯಾತೆ ಮತ್ತೆ ಆರಂಭವಾಗಿದೆ. ಇಂದು ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಎಂಇಎಸ್ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ಮಹಾರಾಷ್ಟ್ರದ ಆರೋಗ್ಯ ಸಚಿವ ದೀಪಕ್ ಸಾವಂತ್ ಹಾಗು ಸಾರಿಗೆ ಸಚಿವ ದಿವಾಕರ್ ರಾವುತ್ ಘೋಷಣೆ ಮಾಡಿದ್ದರು. ಈ ಸಚಿವರು ಬೆಳಗಾವಿಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಇಲ್ಲಿನ ಶಾಂತಿ ಸುವ್ಯವಸ್ಥೆ ದಕ್ಕೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಗೆ ಇಬ್ಬರು ಸಚಿವರು ಆಗಮಿಸದಂತೆ 27ರ ವರೆಗೆ ನಿಷೇಧ ಹೇರಿ ಬೆಳಗಾವಿ ಜಿಲ್ಲಾಧಿಕಾರಿ ಎನ್. ಜಯರಾಂ ಆದೇಶ ಹೊರಡಿಸಿದ್ದಾರೆ. ಎರಡು ದಿನಗಳ ಹಿಂದೆ ಕೊಲ್ಹಾಫುರದಲ್ಲಿ ಕರ್ನಾಟಕದ ಬಸ್ ಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆಯುವ ಮೂಲಕ ಶಿವಸೇನೆ ಕಾರ್ಯಕರ್ತರು ಪುಂಡಾಟ ಪ್ರದರರ್ಶಿಸಿದ್ದರು. ಇಂದು ನಡೆಯುವ ಪ್ರತಿಭಟನೆಯಲ್ಲಿ ಎಂಇಎಸ್ ಕಾರ್ಯಕರ್ತರು ಭಾವಹಿಸುವ ಹಿನ್ನೆಲೆಯಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಗಡಿ ಭಾಗದಲ್ಲಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಇನ್ನೂ ಕಳೆದ 30 ವರ್ಷಗಳ ಹಿಂದೆ ಸಚಿವ ಶರದ್ ಪವಾರ್ ಬೆಳಗಾವಿ ಪ್ರವೇಶ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಅಂಹತ ಪರಿಸ್ಥಿತಿ ಎದುರಾಗಿದೆ. ಜಿಲ್ಲಾಧಿಕಾರಿ ಎನ್ ಜಯರಾಂ ಅವರ ದಿಟ್ಟ ಈ ನಿರ್ಧಾರಕ್ಕೆ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ