‘ಸಿಎಂ ರಾಜ್ಯದ ಜನರ ಕ್ಷಮೆಯಾಚಿಸಬೇಕು’- ಶೋಭಾ29-05-2018

ಚಿಕ್ಕಮಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಖಾತೆಗಳಿಗಾಗಿ ಕಿತ್ತಾಟ ನಡೆಯುತ್ತಿದೆ ಎಂದು, ಸಂಸದೆ ಶೋಭಾ ಕರಂದ್ಲಾಜೆ ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಟೀಕಿಸಿದ್ದಾರೆ. ಕಾಂಗ್ರೆಸ್ಗೆ ಎಲ್ಲಾ ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿ ಅಭ್ಯಾಸ ಹಾಗೂ ರೂಢಿಯಾಗಿದೆ, ಅದೇ ಪರಂಪರೆಯನ್ನು ಮುಂದುವರೆಸಲು ಶತ ಪ್ರಯತ್ನ ಮಾಡುತ್ತಿದೆ. ಫಲವತ್ತಾದ ಖಾತೆಗಳು ಯಾರಿಗೆ ಸಿಗಬೇಕೆಂಬ ಚರ್ಚೆಗಳು ಹಾಗೂ ಗೊಂದಲ ಏರ್ಪಟ್ಟಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಮೊನ್ನೆಯವರೆಗೂ ರೆಸಾರ್ಟ್ ನಲ್ಲಿದ್ದರು, ಇದೀಗ ದೆಹಲಿಯಲ್ಲಿದ್ದಾರೆ. ಹಾಲು ಕೊಡುವ ಹಸು ಯಾರಿಗೆ ಎಂಬುದರ ಬಗ್ಗೆ ಕಿತ್ತಾಟ ನಡೆಯುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂಬ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಶೋಭಾ ಖಂಡನೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಎನ್ನುವುದು ರಾಜ್ಯದಲ್ಲಿ ಅತ್ಯಂತ ಮಹತ್ವದ ಸ್ಥಾನ. ಸಿಎಂ ಕುಮಾರಸ್ವಾಮಿ ಅವರು ಈ ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ