ರೈತನ ಮೇಲೆ ಲಾಂಗ್ ನಿಂದ ಹಲ್ಲೆ!

A farmer assaulted by a unknown man at mandya!

30-05-2018

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಬ್ಬಹಳ್ಳಿ ಗ್ರಾಮದಲ್ಲಿ ರೈತನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಲಿಂಗಯ್ಯ ಹಲ್ಲೆಗೊಳಗಾದ ರೈತ. ಲಿಂಗಯ್ಯ ಸ್ಕೂಟರ್ ನಲ್ಲಿ ತನ್ನ ಜಮೀನಿಗೆ ಹೋಗುವಾಗ ಹಿಂದಿನಿಂದ ಬೈಕ್ ನಲ್ಲಿ ಲಾಂಗ್ ಹಿಡಿದು ಬಂದ ಅಪರಿಚಿತ ವ್ಯಕ್ತಿ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವ ಲಿಂಗಯ್ಯ ಅವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Farmer Assault ಅಪರಿಚಿತ ಮಾರಣಾಂತಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ