ಸಾಲಮನ್ನಾ: ರೈತ ಮುಖಂಡರೊಂದಿಗೆ ಸಿಎಂ ಸಭೆ

loan waiver: CM kumaraswamy meeting with farmer leaders

30-05-2018

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಸಂಪುಟ ಸಭೆ ಕರೆದಿದ್ದಾರೆ ಸಿಎಂ ಕುಮಾರಸ್ವಾಮಿ. ಇಂದು ಬೆಳಿಗ್ಗೆ 11ಕ್ಕೆ ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಯಲಿದೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿತಂತೆ ಇತರೆ ಮುಖಂಡರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಾಲಮನ್ನಾ ಕುರಿತು ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಬಳಿಕ ಸಾಲಮನ್ನಾ ಬಗ್ಗೆ ವಿಧಾನಸೌಧದಲ್ಲಿ 11.30ಕ್ಕೆ ರೈತ ಮುಖಂಡರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ರೈತ ಮುಖಂಡರ ಸಭೆಗೆ ವಿರೋಧ ಪಕ್ಷದ ನಾಯಕ ಬಿಎಸ್ವೈ ಅವರನ್ನೂ ಆಹ್ವಾನಿಸಿದ್ದಾರೆ. ಆದರೆ, ಯಡಿಯೂರಪ್ಪ ಬದಲು ಬಿಜೆಪಿ ಮುಖಂಡ ಗೋವಿಂದ ಕಾರಜೋಳ ಅವರು ಸಭೆಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ