‘ಸಂಸದ,ಶಾಸಕರ ಸಂಬಳಕ್ಕಿಲ್ಲ ಸಮಸ್ಯೆ: ರೈತರ ಸಾಲಮನ್ನಾ ವಿಚಾರದಲ್ಲಿ ಯಾಕೆ’?

No problem on salary of MPs and MLAs: then Why financial problem with farmers loan waiver?

30-05-2018

ಬೆಂಗಳೂರು: ವಿಧಾನಸೌಧದಲ್ಲಿ ಸಿಎಂ ಸಮ್ಮುಖದಲ್ಲಿ ನಡೆದ ರೈತ ಸಭೆಯಲ್ಲಿ, ರೈತ ಮುಖಂಡರಾದ ಮಾರುತಿ ಮಾನ್ಪಡೆ, ಚಾಮರಸ ಪಾಟೀಲ್, ಕುರುಬೂರು ಶಾಂತಕುಮಾರ, ಬಸವರಾಜ್ ಭಾಗವಹಿಸಿ ರೈತ ಪರ ಅಭಿಪ್ರಾಯ ಮಂಡಿಸಿದ್ದಾರೆ. ರಾಷ್ಟ್ರೀಯ ಬ್ಯಾಂಕುಗಳಲ್ಲಿನ ರೈತರ ಸಾಲಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರ ನೆರವು ಕೊಡಲಿ ಎಂದು ಸಭೆಯಲ್ಲಿ ರೈತ ಮುಖಂಡರು ಅಭಿಪ್ರಾಯ ಪಟ್ಟರು.

ಸಾಲಮನ್ನಾ ರಾಜ್ಯ ಸರ್ಕಾರ ಒಂದರಿಂದಲೇ ಮಾಡಲು ಅಸಾಧ್ಯ, ಕೇಂದ್ರದಿಂದಲೂ ಸಾಲಮನ್ನಾ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಬೆಂಬಲ ಸಿಗಬೇಕು, ಕೇಂದ್ರದ ನಿಲುವು ಕುರಿತು ಗೋವಿಂದ ಕಾರಜೋಳ ಸಭೆಯಲ್ಲಿ ಸ್ಪಷ್ಟಪಡಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು. 

ಯುಪಿಎ ಸರ್ಕಾರದಲ್ಲಿ ರೈತರ ಸಾಲ ಮನ್ನಾ ಮಾಡಲಾಗಿತ್ತು. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ರೈತರ ಸಾಲಮನ್ನಾ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಇಚ್ಛಾ ಶಕ್ತಿ ಕೊರತೆ ಇದೆ. ಕೊಟ್ಟ ಮಾತಿನಂತೆ ಸಾಲಮನ್ನಾ ಮಾಡಬೇಕು ಎಂದು ಸಭೆಯಲ್ಲಿ ಒಕ್ಕೊರಲ ವಾದ ಮಂಡಿಸಿದರು.

‘ಸಂಸದರಿಗೆ, ಶಾಸಕರಿಗೆ ಸಂಬಳ ಕೊಡಲು ಹಣಕಾಸು ಸಮಸ್ಯೆ ಆಗಲ್ಲ, ರೈತರ ಸಾಲಮನ್ನಾ ವಿಚಾರದಲ್ಲಿ ಯಾಕೆ ಸಮಸ್ಯೆ ಆಗುತ್ತೆ? ಎಂದು ಪ್ರಶ್ನಿಸಿದ್ದಾರೆ. ಸರ್ಕಾರ ಸಾಲಮನ್ನಾ ಘೋಷಿಸಬೇಕು ಎಂದು ರೈತ ಮುಖಂಡ ಮಾರುತಿ ಮಾನ್ಪಡೆ ಸಭೆಯಲ್ಲಿ ಒತ್ತಾಯಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ