‘ಕಾಲಾ’ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ’- ವಾಟಾಳ್30-05-2018

ಕೊಪ್ಪಳ: 'ಯಾವುದೇ ಕಾರಣಕ್ಕೂ ರಜನಿಕಾಂತ್ ಅಭಿನಯದ ತಮಿಳಿನ 'ಕಾಲಾ' ಚಿತ್ರ ಬಿಡುಗಡೆಯಾಗಲು ಅವಕಾಶ ನೀಡುವುದಿಲ್ಲ' ಎಂದು ಕನ್ನಡಪರ ಸಂಘಟನೆಗಳ ಒಕ್ಕೂಟದ  ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು, ರಜನಿಕಾಂತ್ ಅಭಿನಯದ ಕಾಲಾ ಚಿತ್ರ ಬಿಡುಗಡೆ ಮಾಡಿದರೆ ಚಿತ್ರಮಂದಿರಗಳ ಮುಂದೆ ಪ್ರತಿಭಟಿಸುತ್ತೇವೆ. ಸ್ವಾಭಿಮಾನಿ ಕನ್ನಡಿಗರು ಆ ಸಿನಿಮಾವನ್ನು ನೋಡಬಾರದು ಎಂದು ಮನವಿ ಮಾಡಿದ್ದಾರೆ.

ಇದೇ ವೇಳೆ ರೈತರ ಸಾಲಮನ್ನಾ ಮಾಡದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ 25ಲಕ್ಷ ಪರಿಹಾರ ನೀಡಬೇಕು. ಸಾಲಮನ್ನಾ ಎನ್ನುವುದು ರಾಜಕೀಯಕ್ಕಾಗಿ ಮಾಡುತ್ತಿರುವ ಅಪ್ಪ-ಮಕ್ಕಳ ನಾಟಕ ಎಂದು ಟೀಕೆ ಮಾಡಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದು, ಈ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವೆ. ಪದವೀಧರ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು. ಈ ವೇಳೆ ಕರವೇಯ ಪ್ರವೀಣ್ ಕುಮಾರ್ ಶೆಟ್ಟಿ, ಹಾಗೂ ಕನ್ನಡ ಸೇನೆಯ ಕೆ.ಆರ್.ಕುಮಾರ್, ಸ್ಥಳೀಯ ಕನ್ನಡಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.


ಸಂಬಂಧಿತ ಟ್ಯಾಗ್ಗಳು

Rajinikanth Kala ವಾಟಾಳ್ ನಾಗರಾಜ್ ನಾಟಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ