ಜಾಮೀನು ಅರ್ಜಿ ಮತ್ತೆ ವಜಾ: ಮತ್ತಷ್ಟು ದಿನ ಜೈಲೇ ಗತಿ

Bail plea of Congress MLA

30-05-2018

ಬೆಂಗಳೂರು: ನಗರದ ಯುಬಿ ಸಿಟಿಯ ಫೆರ್ಜಿ ಕೆಫೆಯಲ್ಲಿ ವಿದ್ವತ್‌ ಮೇಲೆ ತೀವ್ರವಾಗಿ ನಡೆಸಿದ ಆರೋಪದಡಿ ಜೈಲು ಸೇರಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮದ್‌ ನಲಪಾಡ್‌ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.

ಆರೋಪಿಯು ಪ್ರಭಾವಿಯಾಗಿರುವುದಲ್ಲದೇ, ವೈದ್ಯಕೀಯ ವರದಿಗಳಲ್ಲಿ ನಲಪಾಡ್ ವಿರುದ್ಧ ಸಾಕ್ಷ್ಯಗಳು ದೊರೆತಿರುವುದರಿಂದ ಜಾಮೀನು ನಿಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಆರೋಪಿ ಪರ ವಕೀಲ ಉಸ್ಮಾನ್ ಹಾಗೂ ವಿದ್ವತ್‌ ಪರ ಪ್ರಾಸಿಕ್ಯೂಟರ್ ಎಂ.ಎಸ್.ಶ್ಯಾಮಸುಂದರ್ ವಾದವನ್ನು ಮಂಡಿಸಿದ್ದರು. ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದ್ದ 63ನೇ ಸೆಷನ್ಸ್ ನ್ಯಾಯಾಲಯ ನಿನ್ನೆ ವಾದವನ್ನು ಆಲಿಸಿ, ಆದೇಶವನ್ನು ಕಾಯ್ದಿರಿಸಿತ್ತು. ಇಂದು ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಪ್ರಕಟಿಸಿದ್ದಾರೆ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ. ಇದರಿಂದ ಮತ್ತಷ್ಟು ದಿನ ನಲಪಾಡ್ ‌ಅಂಡ್ ಟೀಮ್ ಗೆ ಜೈಲೇ ಗತಿ ಎಂಬಂತಾಗಿದೆ. ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆಯೂ ಇದೆ ಎಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ