ನಿರೂಪಕ ಚಂದನ್ ಪತ್ನಿ ಆತ್ಮಹತ್ಯೆಗೆ ಯತ್ನ

Chandan

31-05-2018

ಬೆಂಗಳೂರು,ಮೇ.31-ದೊಡ್ಡಬಳ್ಳಾಪುರದ ಸೋಮೇಶ್ವರ ಬಡಾವಣೆಯ ಮನೆಯಲ್ಲಿ ಇತ್ತೀಚೆಗಷ್ಟೆ ದಾವಣಗೆರೆಯ ಹರಿಹರದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ  ನಿರೂಪಕ ನಟ ಚಂದನ್ ಅವರ ಪತ್ನಿ ಮೀನಾ ಮಗನನ್ನು ಕತ್ತು ಕೊಯ್ದು ಕೊಲೆ ಮಾಡಿ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮನೆಯಲ್ಲಿ ಇಂದು ಬೆಳಿಗ್ಗೆ ಮಗ ತುಷಾರ್(13)ನನ್ನು ಕತ್ತು ಕೊಯ್ದು ಕೊಲೆ ಮಾಡಿ, ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಮೀನಾ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆಕೆಯ ಸ್ಥಿತಿ ಚಿಂತಾಜನಕವಾಗಿದೆ.

ಚಂದನ್ ಸಾವಿನ ಬಳಿಕ ಮಾನಸಿಕವಾಗಿ ಕುಗ್ಗಿದ್ದ ಪತ್ನಿ ಮೀನಾ  ಏನಾದರೂ ಅನಾಹುತ ಮಾಡಿಕೊಳ್ಳಬಹುದೆಂದು ಆಕೆಯ ಅಣ್ಣ ಮತ್ತು ತಂದೆ ಒಂದು ವಾರದಿಂದ ಕಾವಲು ಕಾಯುತ್ತಿದ್ದರು. ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮೀನಾ ಈ ಕೃತ್ಯವೆಸಗಿದ್ದಾರೆ.ದೊಡ್ಡಬಳ್ಳಾಪುರ ನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ