ಕ್ರೈನ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

Bike rider

01-06-2018

ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯಲ್ಲಿ ಗುರುವಾರ ಮಧ್ಯರಾತ್ರಿ ಮೆಟ್ರೋ ಕಾಮಗಾರಿ ನಡೆಸುತ್ತಿದ್ದ ಕ್ರೈನ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತಪಟ್ಟವರನ್ನು ಬನ್ನೇರುಘಟ್ಟ ರಸ್ತೆಯ ಅರಕೆರೆಯ ಸುಶೀಲ್ ಕಾಂಚನ್ (32)ಎಂದು ಗುರುತಿಸಲಾಗಿದೆ.ಉಡುಪಿ ಜಿಲ್ಲೆಯ ಮಲ್ಪೆ ಮೂಲದ  ಸುಶೀಲ್ ಕಾಂಚನ್, ಝೊಮೇಟೋ ಪುಡ್ ಡೆಲಿವೆರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದರು.

ಕೆಲಸ ಮುಗಿಸಿ ಮನೆಗೆ  ಮಧ್ಯರಾತ್ರಿ 1,30ರ ವೇಳೆ ಬೈಕ್‍ನಲ್ಲಿ ಮನೆಗೆ ಬುರುವಾಗ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದೆ ಕ್ರೈನ್ ಡಿಕ್ಕಿ ಹೊಡೆದು ಹೊಟ್ಟೆಯೊಳಗೆ ಕಬ್ಬಿಣದ ರಾಡ್ ತೂರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಮೆಟ್ರೋ ಸಿಬ್ಬಂದಿ ವಿರುದ್ಧ ಮೃತ ಸುಶೀಲ್ ಸ್ನೇಹಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮೈಕೋ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಲಿಗೆಕೋರರ ಸೆರೆ

ಲಾರಿ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ನಗದು, ಮೊಬೈಲ್ ದೋಚಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಲಹಂಕ ಪೆÇಲೀಸರು ಯಶಸ್ವಿಯಾಗಿದ್ದಾರೆ.

ಯಲಹಂಕದ ಗೋಪಿ (22), ಸಲ್ಮಾನ್ (23), ಗಂಗಾಧರ (22), ನವಾಜ್ (23) ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರಿಂದ 4 ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಕಳೆದ ಮೇ 26 ರಂದು ಯಲಹಂಕದ ಮಾರುತಿ ನಗರದ ಬಳಿ ಮಧ್ಯರಾತ್ರಿ ಟಿಪ್ಪರ್ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ ನಗದು, ಮೊಬೈಲ್ ದೋಚಿ ಲಾರಿಯನ್ನು ಕಸಿದು ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿ ಶೋಧ ನಡೆಸಿದಾಗ ಕೃತ್ಯ ನಡೆದ ಸ್ವಲ್ಪ ದೂರದಲ್ಲೇ ಲಾರಿ ಪತ್ತೆಯಾಗಿತ್ತು. ಹೆಚ್ಚಿನ ತನಿಖೆ ಕೈಗೊಂಡು ಕಾರ್ಯಾಚರಣೆ ನಡೆಸಿದಾಗ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.

ಗಾಂಜಾ ವ್ಯಸನಿಗಳಾಗಿದ್ದ ಆರೋಪಿಗಳು ಮಧ್ಯರಾತ್ರಿ ಕಟ್ಟಡದ ತ್ಯಾಜ್ಯ ಸುರಿದು ಹೋಗುವ ಲಾರಿಗಳನ್ನು ಅಡ್ಡಗಟ್ಟಿ ಚಾಲಕರ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಗಳನ್ನು ಯಲಹಂಕ ಇನ್ಸ್‍ಪೆಕ್ಟರ್ ಮಂಜೇಗೌಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಡಿಸಿಪಿ ಕಲಾಕೃಷ್ಣಸ್ವಾಮಿ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ