ಸಂಪುಟ ವಿಸ್ತರಣೆ: ಹೈಕಮಾಂಡ್ ಜೊತೆ ವೇಣುಗೋಪಾಲ್ ಚರ್ಚೆ

KC Venugopal Talk with High Command tomorrow at delhi

02-06-2018

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಇಂದು ದೆಹಲಿಗೆ ತೆರಳಿದ್ದಾರೆ. ನಾಳೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ವರಿಷ್ಠರೊಂದಿಗೆ ಚರ್ಚಿಸಿ, ಪಕ್ಷದ ವತಿಯಿಂದ ಸಚಿವರಾಗುವವರ ಪಟ್ಟಿಗೆ ಅಂಗೀಕಾರದ ಮುದ್ರೆ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ. ಬುಧವಾರ ಮಧ್ಯಾಹ್ನ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬರಲಿದೆ.

ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ನೇಮಿಸಬೇಕು?ಎಂಬುದರ ಬಗ್ಗೆಯೂ ಹೈಕಮಾಂಡ್ ನೊಂದಿಗೆ ಚರ್ಚಿಸಲಿದ್ದಾರೆ. ನಿಗಮ ಮಂಡಳಿಗಳಿಗೆ ಅಧ್ಯಕ್ಷರು-ಉಪಾಧ್ಯಕ್ಷರು ಸೇರಿದಂತೆ ಇತರೆ ಪದಾಧಿಕಾರಿಗಳ ನೇಮಕಾತಿ ವಿಚಾರದ ಬಗ್ಗೆಯೂ ಚರ್ಚಿಸಿ, ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ ಕೆ.ಸಿ.ವೇಣುಗೋಪಾಲ್.


ಸಂಬಂಧಿತ ಟ್ಯಾಗ್ಗಳು

KPCC AICC ಸಚಿವ ಸಂಪುಟ ವರಿಷ್ಠ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ