‘ಇದು ಹಳಸಿದವರ ಹಾಗೂ ಹಸಿದವರ ಸರ್ಕಾರ’-ಸಿಟಿ ರವಿ

congress-jds coalition government not stable for more days said MLA  C.T Ravi

02-06-2018

ಬಳ್ಳಾರಿ: ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ರೆಡ್ಡಿ ಪರ ಶಾಸಕ ಸಿಟಿ ರವಿ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ರವಿ, ಹೈದರಾಬಾದ್ ಕರ್ನಾಟಕ ಭಾಗದಲ್ಲಿರುವ ಆರು ಕ್ಷೇತ್ರಗಳನ್ನು ಬಿಜೆಪಿ ಗೆಲ್ಲುವ ವಿಶ್ವಾಸ ನನಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಇನ್ನೂ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿತ್ತು‌, ಅದು ಸಾಧ್ಯವಾಗಿಲ್ಲ. ವಿಜಯಪುರ, ಬಳ್ಳಾರಿ, ಬೆಂಗಳೂರಿನಲ್ಲಿ ಸ್ಥಾನಗಳನ್ನು ಕಳೆದುಕೊಂಡದ್ದರಿಂದ ಬಹುಮತ ಪಡೆಯಲಾಗಲಿಲ್ಲ ಎಂದರು. ಇದೀಗ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾರೆ. ಈ ಅಪವಿತ್ರ ಮೈತ್ರಿ ಬಹಳ ದಿನಗಳ ಕಾಲ ನಡೆಯುವುದಿಲ್ಲ. 'ಈ ಸರ್ಕಾರ ಹಳಸಿದವರ ಹಾಗೂ ಹಸಿದವರ ಸರ್ಕಾರ, ಹಳಸಿದವರು ಕಾಂಗ್ರೆಸ್ ನವರು, ಹಸಿದವರು ಜೆಡಿಎಸ್ ನವರು' ಎಂದು ಲೇವಡಿ ಮಾಡಿದ್ದಾರೆ.

ತಾಂತ್ರಿಕವಾಗಿ ಅಧಿಕಾರಕ್ಕೇರಿದ ಜೆಡಿಎಸ್ ಬಹಳ ದಿನಗಳು ಉಳಿಯಲ್ಲ ಎಂದರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಪಥದಲ್ಲಿ ಭಾರತ ಸಾಗುತ್ತಿದೆ. ನೋಟು ಅಮಾನ್ಯೀಕರಣದಿಂದಾಗಿ ತೆರಿಗೆಯ ವ್ಯಾಪ್ತಿ ಎರಡು ಪಟ್ಟು ಹೆಚ್ಚಾಯಿತು. ಜಿಎಸ್ ಟಿ ಆರ್ಥಿಕ ಮಟ್ಟದಲ್ಲಿ ಒಂದು ದೊಡ್ಡ ಕ್ರಾಂತಿ ಸೃಷ್ಠಿಸಿದೆ ಎಂದು ಕೇಂದ್ರ ಸರ್ಕಾರದ ನಡೆಯನ್ನು ಸರ್ಮಥಿಸಿಕೊಂಡಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

CT Ravi GST ಅಪವಿತ್ರ ಅಧಿಕಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ