ರಕ್ಷಣೆಗಾಗಿ ಬೀದಿಗಿಳಿದ ಮಹಿಳೆಯರು

women

02-06-2018

ಹಾವೇರಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯಗಳನ್ನು ಖಂಡಿಸಿ, ಹಾವೇರಿಯಲ್ಲಿ ಮಹಿಳಾ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಮಲತಂದೆಯೇ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ರೀತಿಯ ನೀಚ ಕೃತ್ಯ ಎಸಗಿದ ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಮಹಿಳಾ ಸಂಘಟನೆಗಳು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ, ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಪ್ರಕರಣಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ಎಚ್ಚರಿಸಿದ್ದಾರೆ. ಪ್ರತಿಭಟನೆಗೆ ಅಲ್ಪ ಸಂಖ್ಯಾತರು ಹಾಗೂ ಪ್ರಗತಿಪರ ಸಂಘನೆಗಳು ಸೇರಿದಂತೆ ಇತರೆ ಸಂಘಟನೆಗಳು ಸಾಥ್ ನೀಡಿದ್ದವು.


ಸಂಬಂಧಿತ ಟ್ಯಾಗ್ಗಳು

Rape protest ಧಿಕ್ಕಾರ ಆಕ್ರೋಶ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ