ಗಲಭೆಪೀಡಿತ ಪ್ರದೇಶಗಳಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಸ್ವಾತಂತ್ರ್ಯ!

Kannada News

25-05-2017

ನವದೆಹಲಿ: ಸೇನಾ ಅಧಿಕಾರಿಗಳಿಗೆ ತುರ್ತು ಸಂದರ್ಭ ಹಾಗೂ ಪ್ರದೇಶಗಳಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಸ್ವಾತಂತ್ರ್ಯವಿದೆ ಎಂದು ರಕ್ಷಣಾ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ತುರ್ತು ಸಂಧರ್ಭದಲ್ಲಿ ಸಂಸತ್ತಿನ ಯಾವುದೇ ಅಧಿಕಾರಿಗಳನ್ನು ಸಂಪರ್ಕಿಸದೆ ಸಂದರ್ಭಕ್ಕೆ ತಕ್ಕಂತೆ ನಿರ್ಣಯಗಳನ್ನು ಕೈಗೊಳ್ಳುವ ಸ್ವಾತಂತ್ರ್ಯವಿದೆ. ಗಲಭೆಪೀಡಿತ ಪ್ರದೇಶಗಳಲ್ಲಿ  ಸೂಕ್ತ ಸಂದರ್ಭಕ್ಕೆ ಸೇನಾ ಅಧಿಕಾರಿಗಳ ನಿರ್ಣಯ ಕೈಗೊಳ್ಳಬಹುದು ಎಂದು ಇತ್ತೀಚೆಗೆ ನಡೆದ ಘಟನೆಯನ್ನು ಪ್ರಸ್ತಾಪಿಸದೆಯೇ ತಿಳಿಸಿದ್ದಾರೆ. ಜಮ್ಮು ಕಾಶ್ಮೀರಕ್ಕೆ ಸಂಭಂದಿಸಿದಂತೆ ಇತ್ತೀಚಿನ ಘಟನೆಗಳ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸುವಾಗ ಈ ಮಾತನ್ನು ಹೇಳಿದ್ದಾರೆ.
.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ