ಭೀಕರ ಅಪಘಾತ ನಾಲ್ವರ ದುರ್ಮರಣ

Accident 4 spot out

02-06-2018

ಕಲಬುರಗಿ: ಎರಡು ಸಾರಿಗೆ ಬಸ್ ಗಳ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ, ಮೂವರು ಶಿಕ್ಷಕರು ಮತ್ತು ಓರ್ವ ಚಾಲಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಜೇವರ್ಗಿ ಹೊರವಲಯದಲ್ಲಿ ಘಟನೆ ನಡೆದಿದೆ.

ಕಲಬುರಗಿಯಿಂದ ದಾವಣಗೆರೆಗೆ ಹೋಗುತ್ತಿದ್ದ ಬಸ್ ಒಂದು ಕಡೆಯಾದರೆ, ಸುರಪುರದಿಂದ ಕಲಬುರಗಿಗೆ ಬರುತ್ತಿದ್ದ ಮತ್ತೊಂದು ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಜಿಟಿ ಜಿಟಿ ಮಳೆಯೇ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಮಂಜು ಮುಸುಕಿದ ವಾತಾವರಣದಲ್ಲಿ ಅತಿ ವೇಗದಲ್ಲಿ ಬಂದ್ ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿ ಸಿಲುಕಿಕೊಂಡಿದ್ದವರನ್ನು ರಕ್ಷಿಸಿ, ಗಾಯಾಳುಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇದರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Accident KSRTC ದುರ್ಘಟನೆ ಮುಖಾಮುಖಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ