ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ!

who is next KPCC Chief?

02-06-2018

ಬೆಂಗಳೂರು: ಮುಂದಿನ ವಾರದಲ್ಲಿ ಶುರುವಾಗಲಿದೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಭರ್ತಿ ಪ್ರಕ್ರಿಯೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶದಿಂದ ಆಗಮಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತ ಚರ್ಚೆ ನಡೆಯಲಿದ್ದು, ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ. ಅದಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಹಿರಿಯರ ಮಧ್ಯೆ ಪೈಪೋಟಿ ಆರಂಭವಾಗಿದೆ. ಪ್ರಮುಖವಾಗಿ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಎಸ್.ಆರ್.ಪಾಟೀಲ್, ಕೃಷ್ಣ ಬೈರೇಗೌಡ ನಡುವೆ ಪೈಪೋಟಿ ಏರ್ಪಟ್ಟಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸಚಿವ ಸ್ಥಾನದ ಜೊತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಬೇಡಿಕೆ ಇಟ್ಟಿರುವ ಡಿ.ಕೆ.ಶಿವಕುಮಾರ್. ಸಚಿವ ಸ್ಥಾನ ಕೊಡದಿದ್ದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡುವಂತೆ ಪಟ್ಟು ಹಿಡಿದಿರುವ ಎಂ.ಬಿ.ಪಾಟೀಲ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು ಇಟ್ಟಿರುವ ಕೃಷ್ಣ ಬೈರೇಗೌಡ. ಎಸ್.ಆರ್.ಪಾಟೀಲ್ ರಿಗೆ ಕೆಪಿಸಿಸಿ ಅಧ್ಯಕ್ಷ ಗಾದಿ ಕೊಡುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಪ್ರಸ್ತಾಪಿಸಲಿದ್ದಾರೆ  ಎಂದೆನ್ನಲಾಗುತ್ತಿದೆ.

ಕೆಪಿಸಿಸಿಯ ಎರಡು ಕಾರ್ಯಾಧ್ಯಕ್ಷ ಸ್ಥಾನಗಳ ಬದಲಾವಣೆಯೂ ಸಾಧ್ಯತೆ ಇದ್ದು, ದಿನೇಶ್ ಗುಂಡೂರಾವ್ ಮತ್ತು ಎಸ್.ಆರ್.ಪಾಟೀಲ್ ಬದಲಿಗೆ ಮತ್ತಿಬ್ಬರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆಗಳಿವೆ. ಒಟ್ಟಾರೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶದಿಂದ ಬಂದ ಬಳಿಕೆ ಈ ಅಂತೆ ಕಂತೆಗಳಿಗೆ ತೆರೆ ಬೀಳಲಿದೆ.


ಸಂಬಂಧಿತ ಟ್ಯಾಗ್ಗಳು

KPCC AICC ಕಾರ್ಯಾಧ್ಯಕ್ಷ ವಿದೇಶ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ