ಮಳೆ ಹೊಡೆತಕ್ಕೆ ನೆಲಕಚ್ಚಿದ ಬಾಳೆ ಬೆಳೆ

Heavy Rain: lakhs worth Banana crop damaged

04-06-2018

ವಿಜಯಪುರ: ಮಳೆ ಅವಾಂತರಕ್ಕೆ ಅನ್ನದಾತರು ಕಂಗಾಲಾಗಿದ್ದಾರೆ. ಭಾರೀ ಮಳೆಗೆ ಅಪಾರ ಪ್ರಮಾಣದ ಬಾಳೆ ಬೆಳೆಗೆ ಹಾನಿಯಾಗಿದೆ. ಜಿಲ್ಲೆಯ ನಾಲತವಾಡ ಪಟ್ಟಣದ ರಮೇಶ್ ಗಂಗನಗೌಡ, ಅಮರಪ್ಪ ಗಂಗನಗೌಡ, ತಿಪ್ಪಣ ಕೆಂಬಾವಿ, ರೆವಣಪ್ಪ ಕೆಂಬಾವಿ ಎಂಬುವರ ಹೊಲಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಮಳೆಯ ಹೊಡೆತಕ್ಕೆ ಬಾಳೆ ಬೆಳೆ ನೆಲಕಚ್ಚಿದೆ. ಒಟ್ಟು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಸಂಪೂರ್ಣ ನಾಶವಾಗಿದೆ.

ಭರ್ಜರಿಯಾಗಿ ಬಂದಿದ್ದ ಬೆಳೆ ಮಣ್ಣುಪಾಲಾಗಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವೆಡೆ ಸಾಕಷ್ಟು ಹಾನಿ ಸಂಭವಿಸಿದೆ. ಸಾಲ ಸೋಲ ಮಾಡಿ ಬಾಳೆ ಬೆಳೆದಿದ್ದ ರೈತರು ತಲೆ ಮೇಲೆ ಕೈಹೊತ್ತು ಕೂತಿದ್ದಾರೆ. ಲಕ್ಷಾಂತರ ಬೆಲೆಬಾಳುವ ಬಾಳೆ ನೆಲಕ್ಕಚ್ಚಿದ್ದರಿಂದ ಕಂಗಾಲಾಗಿದ್ದು, ಪರಿಹಾರಕ್ಕಾಗಿ ಸರ್ಕಾರದ ಮೊರೆ ಹೋಗಿದ್ದಾರೆ ರೈತರು.


ಸಂಬಂಧಿತ ಟ್ಯಾಗ್ಗಳು

Heavy Rain Farmers ನೆಲಕಚ್ಚಿದೆ ಭಾರೀ ಮಳೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ