ಯುವತಿಗೆ ಅಶ್ಲೀಲ ಮೆಸೇಜ್: ಯುವಕನಿಗೆ ಧರ್ಮದೇಟು

A young boy hardly beaten by group of girls at davangere

04-06-2018

ದಾವಣಗೆರೆ: ಯುವತಿಯರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಯುವಕನಿಗೆ ಧರ್ಮದೇಟು ಬಿದ್ದಿದೆ. ವಾಟ್ಸ್ ಆ್ಯಪ್, ಫೇಸ್‌ ಬುಕ್‌ ನಲ್ಲಿ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಜಿಲ್ಲೆಯ ಜಗಳೂರಿನಲ್ಲಿ ಘಟನೆ ನಡೆದಿದೆ. ನವ್ಯಜ್ಞಾನ ಜ್ಯೋತಿ ಸಂಸ್ಥೆಯ ಯುವತಿಯೊಬ್ಬರಿಗೆ,  ಜಗಳೂರು ತಾಲ್ಲೂಕಿನ ಕಲ್ಲೇದೇವರಪುರ ಗ್ರಾಮದ ಯುವಕ ಪ್ರತಿನಿತ್ಯ ಫೇಸ್‌ ಬುಕ್‌, ವಾಟ್ಸ್ ಆ್ಯಪ್ ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದನು. ಅಲ್ಲದೆ ಯುವತಿಗೆ ಬೇರೆಯವರ ಜೊತೆ ಅನೈತಿಕ ಸಂಬಂಧ ಕಲ್ಪಿಸಿ ಸಂದೇಶ ರವಾನಿಸುತ್ತಿದ್ದ. ಇದರಿಂದ ಮನನೊಂದ ಯುವತಿ ಜಗಳೂರಿಗೆ ಬಂದು ಯುವಕನನ್ನು ಕರೆಸಿ, ಯುವತಿಯರೊಂದಿಗೆ ಸೇರಿ ಥಳಿಸಿದ್ದಾರೆ. ಯುವಕನ್ನು ಹಿಗ್ಗಾಮುಗ್ಗ ಹೊಡೆಯುತ್ತಿರುವ ವೀಡೀಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕ ಜಗಳೂರಿನ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಎಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ