‘ರಾಜ್ಯ ಸಮ್ಮಿಶ್ರ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು’-ಶೆಟ್ಟರ್04-06-2018

ಹಾವೇರಿ: ಕಾಂಗ್ರೆಸ್ ರಾಜ್ಯದಲ್ಲಿ ದಯನೀಯ ಸೋಲು ಕಂಡಿದೆ. ಕಾಂಗ್ರೆಸ್ ಪಕ್ಷಕ್ಕೆ ನೂರಾರು ವರ್ಷಗಳ ಇತಿಹಾಸ ಇದೆ. ಆದರೆ, ಕೇವಲ ಬಿಜೆಪಿಯನ್ನು ಸೋಲಿಸಲು ಸಣ್ಣ-ಸಣ್ಣ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಜೊತೆ ಯಾವುದೇ ಷರತ್ತು ಇಲ್ಲದೆ ಬೆಂಬಲ ನೀಡಿದ್ದು ನೋಡಿದರೆ ಕಾಂಗ್ರೆಸ್ ಪಕ್ಷಕ್ಕೆ ಅಡ್ರೆಸ್ ಇಲ್ಲದಂತಾಗಿದೆ ಎಂದು ಲೇವಡಿ ಮಾಡಿದ್ದಾರೆ. ದೇಶದ ಸಣ್ಣ-ಸಣ್ಣ ಪಕ್ಷಗಳ ಜೊತೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಪ್ಲಾನ್ ಮಾಡುತ್ತಿದೆ. ಆದರೆ, ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಲಿದ್ದಾರೆ ಮತ್ತೆ ನರೇಂದ್ರ ಮೋದಿಗೆ ಮುಂದಿನ ಚುನಾವಣೆಯಲ್ಲಿ ಆಶೀರ್ವಾದ ಮಾಡುತ್ತಾರೆ ಎಂದರು.

ಕಾಂಗ್ರೆಸ್ ಪಕ್ಷ ಜೆಡಿಎಸ್ ನ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡುವ ಬದಲು, ಕಾಂಗ್ರೆಸ್ ಪಕ್ಷವನ್ನು ಜೆಡಿಎಸ್ ಜೊತೆ ವಿಲೀನ ಮಾಡಿಕೊಳ್ಳುವದು ಸೂಕ್ತ, ರಾಜ್ಯದಲ್ಲಿ ಇನ್ನೂ ಸಂಪುಟ ರಚನೆ ಆಗಿಲ್ಲ ಕಾಂಗ್ರೆಸ್ ಪಕ್ಷದ ಯುವರಾಜ ಬರುವವರೆಗೂ ಸಂಪುಟ ರಚನೆ ಆಗಲ್ಲ ಎಂದರು.

ಮಳೆಯಿಂದ ಅನೇಕ ಕಡೆ ಹಾನಿಯಾಗಿದೆ. ಅಧಿಕಾರಿಗಳು ಸರಿಯಾದ ಕೆಲಸ ಮಾಡುತ್ತಿಲ್ಲ ಸಂಪುಟ ಇಲ್ಲದೇ ಇವಕ್ಕೆಲ್ಲ ಪರಿಹಾರ ಸಿಗುವುದಿಲ್ಲ ಎಂದರು. ದೇವೇಗೌಡರು ತನ್ನ ಪುತ್ರ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಆಸೆಯನ್ನು ಅವರು ತೀರಿಸಿಕೊಂಡಿದ್ದಾರೆ ಎಂದರು. ಕುಮಾರಸ್ವಾಮಿ ರೈತರ ಸಾಲ ಸಂಪೂರ್ಣ ಮನ್ನಾ ಮಾಡಲೇಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ನ ಸಮ್ಮಿಶ್ರ ಸರ್ಕಾರ ಯಾವಾಗ ಬೇಕಾದರೂ ಬೀಳಬಹು, ಮುಂದೆ ಹೊಸ ಸರ್ಕಾರ ರಚನೆಯಾಗಲಿದೆ ಎಂದಿದ್ದಾರೆ ಜಗದೀಶ್ ಶೆಟ್ಟರ್.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Ffgyhhfgk
  • 11
  • Professional
Aghajkkdgb
  • &₹&@&
  • Professional