‘ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದೇವೆ’- ಭೈರತಿ ಬಸವರಾಜ್

"We have demanded a ministerial position" - Bhairathi Basavaraj

04-06-2018

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಶಾಸಕರಾದ ಭೈರತಿ ಬಸವರಾಜ್, ಎಸ್.ಟಿ ಸೋಮಶೇಖರ್, ಮುನಿರತ್ನ ಜೊತೆಗಿದ್ದ ವೇಳೆ ಭೈರತಿ ಬಸವರಾಜ್ ಹೇಳಿಕೆ ನೀಡಿ, ನಾವು ಮೂವರು ಕೂಡ ಸಚಿವ ಸ್ಥಾನ ಕೊಡಿ ಎಂದು ಡಿಸಿಎಂ ಬಳಿ ಮನವಿ ಮಾಡಿದ್ದೇವೆ. ಅದಕ್ಕೆ ಅವರು ನೋಡೋಣ ಎಂದಿದ್ದಾರೆ. ಆದರೆ, ನಮ್ಮ ಮೂವರಲ್ಲಿ ಯಾರಿಗಾದರೂ ಸಚಿವ ಸ್ಥಾನ ಸಿಗಲಿ ಎಂಬುದು ನಮ್ಮ ಬೇಡಿಕೆ ಎಂದು ರಾಜ್ಯ ಸಚಿವ ಸಂಪುಟ ರಚನೆ ವಿಚಾರದ ಕುರಿತು ಪ್ರತಿಕ್ರಿಯಿಸಿದ್ದಾರೆ. 'ನಾವು ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದೇವೆ, ನಾವೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಗಳು ಎಂಬುದನ್ನು ಹೇಳಿಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

KPCC byrathi basavaraj ಶಾಸಕ ಬೇಡಿಕೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ