ಹಿರಿಯ ನಾಗರಿಕರಿಗೆ ಪಿಂಚಣಿ ನೀಡುವ ಭರವಸೆಗೆ ಬದ್ಧ: ಸಿಎಂ

pension for senior citizens: CM?

05-06-2018

ಬೆಂಗಳೂರು: '65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪಿಂಚಣಿ ನೀಡುವ ಭರವಸೆ ನೀಡಿದ್ದೆ. ಅದಕ್ಕೆ ನಾನು ಬದ್ಧನಾಗಿದ್ದು, ಮುಂದಿನ ಬಜೆಟ್ ನಲ್ಲಿ ಜಾರಿಗೆ ತರುತ್ತೇನೆ' ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

'ನಾನು ಎಂದೂ ಪೊಳ್ಳು ಭರವಸೆಗಳನ್ನು ನೀಡುವುದಿಲ್ಲ. ಚುನಾವಣೆಯ ವೇಳೆ ಹಿರಿಯ ನಾಗರಿಕರಿಗೆ ಪಿಂಚಣಿ ಯೋಜನೆ ಜಾರಿಗೆ ತರುತ್ತೇನೆ ಎಂದು ಆಶ್ವಾಸನೆ ಕೊಟ್ಟಿದ್ದು, ನನ್ನ ಆಂತರಿಕ ಒತ್ತಾಯದಿಂದ. ಆಸ್ಪತ್ರೆಗಳು ಬಹಳ ಕೆಟ್ಟ ಪರಿಸ್ಥಿತಿಯಲ್ಲಿವೆ. ಹಾಗಾಗಿ ಒಂದು ಬಡ ಕುಟುಂಬ 10 ರಿಂದ 20 ಲಕ್ಷ ಹಣವನ್ನು ಆರೋಗ್ಯ ಕಾಪಾಡಿಕೊಳ್ಳಲು ಖರ್ಚು ಮಾಡುವ ಸ್ಥಿತಿಯಲ್ಲಿ ಇಲ್ಲ. ನಾನು ಮಾಡಿದ ಈ ಘೋಷಣೆಯನ್ನು ನಿಲ್ಲಿಸುವುದಿಲ್ಲ' ಎಂದರು.

ಸರ್ಕಾರದ ಬೊಕ್ಕಸಕ್ಕೆ ಯಾವುದೇ ಧಕ್ಕೆ ಆಗದ ರೀತಿಯಲ್ಲಿ ರೈತರ ಸಾಲಮನ್ನಾ ಮಾಡಬೇಕಿದೆ. 2004ರಲ್ಲಿ ಆರ್ಥಿಕ ಶಿಸ್ತನ್ನು ತರುವ ಉದ್ದೇಶದಿಂದ ಒಂದು ಕಾಯಿದೆಯನ್ನು ಜಾರಿಗೊಳಿಸಲಾಗಿದೆ. ಅದರ ಇತಿಮಿತಿಯಲ್ಲಿ ನಾನು ಕೆಲಸ ಮಾಡಬೇಕಿದೆ. ಸಾಲ ಮನ್ನಾದಂತಹ ವಿಷಯವನ್ನೂ ಈ ಪರಿಧಿಯಲ್ಲಿಯೇ ಜಾರಿಮಾಡಬೇಕಾದ ಅನಿವಾರ್ಯತೆ ಇದೆ ಎಂದರು.

ಸರ್ಕಾರಿ ಸಂಸ್ಥೆಗಳಲ್ಲಿ ನಡೆಯುವ ದುಂದುವೆಚ್ಚ ಕಡಿವಾಣಕ್ಕೆ ನಾನು ಬದ್ಧ. ನಾನು ಬಳಸುತ್ತಿರುವ ಸರ್ಕಾರಿ ಕಾರಿಗೆ ನನ್ನ ಸ್ವಂತ ದುಡ್ಡಿನಿಂದಲೇ ಇಂಧನವನ್ನು ಹಾಕಿಸಿಕೊಳ್ಳುತ್ತಿದ್ದೇನೆ. ಬದಲಾವಣೆ ತರಬೇಕಾದರೆ ತುಂಬಾ ಸಾಹಸ ಮಾಡಬೇಕಿದೆ. ನನ್ನ ರಾಜ್ಯದ ಜನತೆ ಕಟ್ಟುವ ತೆರಿಗೆ ಹಣವನ್ನು ದುಂದು ವೆಚ್ಚ ಮಾಡದೇ ಒಂದೊಂದು ಪೈಸೆಯೂ ಸದ್ಭಳಕೆ ಆಗಬೇಕು ಎಂದರು.


ಸಂಬಂಧಿತ ಟ್ಯಾಗ್ಗಳು

H.D.Kumaraswamy Pension ದುಂದುವೆಚ್ಚ ಇಂಧನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ