ಪತ್ರಿಕಾ ಛಾಯಾಗ್ರಾಹಕನ ಮೇಲೆ ಹಲ್ಲೆ!

Assault on photojournalist at shimoga!

05-06-2018

ಶಿವಮೊಗ್ಗ: ಜಿಲ್ಲೆಯ ರಾಜೇಂದ್ರ ನಗರದಲ್ಲಿ ಪತ್ರಿಕಾ ಛಾಯಾಗ್ರಾಹಕನ ಮೇಲೆ ಅಪರಿಚಿತರಿಂದ ಹಲ್ಲೆ ನಡೆದಿದೆ. ಸೋಮನಾಥ್ ಹಲ್ಲೆಗೆ ಒಳಗಾದ ಪತ್ರಿಕಾ ಛಾಯಾಗ್ರಾಹಕ. ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬರುವ ವೇಳೆ ಬೈಕ್ ನಲ್ಲಿ ಹಿಂಬದಿಯಿಂದ ಬಂದ ಇಬ್ಬರು ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಸೋಮನಾಥ್ಗೆ ತಲೆಯ ಹಿಂಭಾಗದಲ್ಲಿ ತೀವ್ರವಾಗಿ ಗಾಯವಾಗಿದೆ. ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


ಸಂಬಂಧಿತ ಟ್ಯಾಗ್ಗಳು

photojournalist Assault ಸ್ಥಳೀಯ ಚಿಕಿತ್ಸೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ