ಸಚಿವ ಸಂಪುಟ ವಿಸ್ತರಣೆ ಕಸರತ್ತು ದೆಹಲಿಗೆ ಶಿಫ್ಟ್!

karnataka congress leaders meeting with Rahul Gandhi at delhi!

05-06-2018

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕಸರತ್ತು ದೆಹಲಿಗೆ ಶಿಫ್ಟ್ ಆಗಿದೆ. ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಯಲಿದೆ. ಇದಕ್ಕೂ ಮೊದಲು ಕೆ.ಸಿ.ವೇಣುಗೋಪಾಲ್ ಜೊತೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ನಾಲ್ಕು ಮುಖ್ಯ ವಿಷಯಗಳ ಬಗ್ಗೆ ಮಾತ್ರ ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ವಿಚಾರಗಳು ಯಾವುವೆಂದರೆ, ಹೆಚ್.ಡಿ.ಕುಮಾರಸ್ವಾಮಿಗೆ 5 ವರ್ಷ ಸಿಎಂ ಸ್ಥಾನ ನೀಡುವ ಬಗ್ಗೆ ಕೆಲವರಿಂದ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ, ಡಿಕೆಶಿಗೆ ಮಂತ್ರಿ ಸ್ಥಾನ ನೀಡುವುದರ ಬಗ್ಗೆ ಮತ್ತು ಐಟಿ-ಇಡಿ ದೂರುಗಳ ಹಿನ್ನೆಲೆಯಲ್ಲಿ ಡಿಕೆಶಿಗೆ ಅವಕಾಶ ನೀಡುವ ಬಗ್ಗೆ ಚರ್ಚೆ, ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷತೆ ಕೊಡುವ ಬಗ್ಗೆಯೂ ಸಮಾಲೋಚನೆ ನಡೆಸಲಿದ್ದಾರೆ. ಹಿರಿಯರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ, 22ರ ಪೈಕಿ ಎಷ್ಟು ಮಂದಿಗೆ ಸಚಿವ ಸ್ಥಾನ ನೀಡಬೇಕೆಂಬ ಬಗ್ಗೆ ಚರ್ಚೆ ನಡೆಯಲಿದೆ. 12 ಅಥವಾ 17 ಮಂದಿಗೆ ಅವಕಾಶ ಕೊಡುವ ಸಾಧ್ಯತೆ ಇದೆ. ಸಭೆಯಲ್ಲಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾರ್, ಕೆ.ಸಿ. ವೇಣುಗೋಪಾಲ್ ಪಾಲ್ಗೊಳ್ಳಲಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ