ಸಿಬಿಎಸ್​ಸಿ ಫಲಿತಾಂಶ ವಿಳಂಬ ! ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ !

Kannada News

25-05-2017

ನವದೆಹಲಿ:-ಸಿಬಿಎಸ್​ಸಿಯ 12ನೇ ತರಗತಿಯ ಫಲಿತಾಂಶವನ್ನು ಶೀಘ್ರ ಪ್ರಕಟಿಸಲಾಗುವುದು,ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಕಾಶ್​ ಜಾವಡೇಕರ್​ ತಿಳಿಸಿದ್ದಾರೆ. ಸಿಬಿಎಸ್​ಸಿ ಫಲಿತಾಂಶ ಪ್ರಕಟವಾಗುವ ಕುರಿತು ಅನಿಶ್ಚಿತತೆ ಮನೆಮಾಡಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಜಾವಡೇಕರ್​ ಸಿಬಿಎಸ್​ಸಿ ಮಂಡಳಿ ನಿಗದಿತ ಸಮಯಕ್ಕೆ ಫಲಿತಾಂಶವನ್ನು ಪ್ರಕಟಿಸಲಿದೆ.ಶೀಘ್ರ ಫಲಿತಾಂಶ ದಿನಾಂಕವನ್ನು ಪ್ರಕಟಿಸಲಾಗುವುದು, ನ್ಯಾಯಾಲಯದ ತೀರ್ಪಿನಿಂದ ವಿದ್ಯಾರ್ಥಿಗಳು ವಿಚಲಿತರಾಗಬೇಕಿಲ್ಲ. ಎಲ್ಲರಿಗೂ ನ್ಯಾಯ ದೊರೆಯಲಿದೆ ಎಂದು ತಿಳಿಸಿದ್ದಾರೆ. ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್​ಇ) 2017ರ 12ನೇ ತರಗತಿಯ ಪರೀಕ್ಷಾ ಮೌಲ್ಯಮಾಪನದಲ್ಲಿ ಕೃಪಾಂಕ ನೀತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ, ಮತ್ತೆ ಮೌಲ್ಯಮಾಪನ ಮಾಡಿ ಕೃಪಾಂಕ ಸೇರಿಸಬೇಕಾದ್ದರಿಂದ ಪರೀಕ್ಷಾ ಫಲಿತಾಂಶ ವಿಳಂಬವಾಗುವ ಸಾಧ್ಯತೆಯಿದೆ. ಸಿಬಿಎಸ್​ಸಿ 12ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಬುಧವಾರ ವೆಬ್​ಸೈಟ್​ನಲ್ಲಿ ಪ್ರಕಟಿಸುವುದಾಗಿ ಮಂಗಳವಾರ ತಿಳಿಸಿತ್ತು. ಆದರೆ, ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬುಧವಾರ ಫಲಿತಾಂಶ ಪ್ರಕಟಗೊಂಡಿಲ್ಲ. ಆದ್ದರಿಂದ ಕೇಂದ್ರ ಶಿಕ್ಷಣ ಸಚಿವ ಪ್ರಕಾಶ್​ ಜಾವಡೇಕರ್​ ವಿಧ್ಯಾರ್ಥಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.   ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ