ಕುಡುಕನಿಂದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ!

A Drunk man attempted to Rape a women at chikkamagaluru

05-06-2018

ಚಿಕ್ಕಮಗಳೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೊರ್ವ ಮಹಿಳೆ ಮೇಲೆ ಅತ್ಯಾಚರಕ್ಕೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಜಿಲ್ಲೆಯ ತರೀಕೆರೆ ತಾಲ್ಲೂಕಿನ‌ ಹೊಸಹಳ್ಳಿ ತಾಂಡ್ಯ ಗ್ರಾಮದಲ್ಲಿ ಕೃತ್ಯ ಬೆಳಕಿಗೆ ಬಂದಿದೆ. ಪತಿ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಸಿನಿಮೀಯ ರೀತಿ ದಾಳಿ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಪತಿಯು ಹಿಗ್ಗಾಮುಗ್ಗ ಥಳಿಸಲು ಮುಂದಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಹೇಮ್ಲಾ ನಾಯ್ಕ್ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rape Harassment ಅತ್ಯಾಚಾರ ಅಮಲು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ