‘ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ’- ಎಚ್.ವಿಶ್ವನಾಥ್

HD devegowda will decide whether i should be in cabinet or not!

05-06-2018

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಂಪುಟ ರಚನೆ ಕಸರತ್ತು ಮುಂದುವರೆದಿದೆ. 22:12 ಸೂತ್ರದ ಆಧಾರದಲ್ಲಿ ಖಾತೆಗಳ ಹಂಚಿಕೆ ಮುಗಿಯುತ್ತಿದ್ದಂತೆ, ಒಂದೆಡೆ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಮತ್ತೊಂದೆಡೆ ಶಾಸಕರು ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುವ ತಂತ್ರದ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಪರಿಸ್ಥಿತಿ ಭಿನ್ನವಾಗಿಲ್ಲ. ಜೆಡಿಎಸ್ ನ ಹೈಕಮಾಂಡ್ ದೇವೇಗೌಡರ ಹಿಂದೆ ಸಚಿವ ಸ್ಥಾನಕ್ಕಾಗಿ ದುಂಬಾಲು ಬಿದ್ದಿದ್ದಾರೆ. ಇನ್ನು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರನ್ನು ಭೇಟಿಯಾದ ನಂತರ ಮಾತನಾಡಿದ ಹೆಚ್.ವಿಶ್ವನಾಥ್, ‘ತಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ’ ಎಂದು ಹೇಳಿದ್ದಾರೆ. ‘ದೇವೇಗೌಡರು ರಾಜಕೀಯವಾಗಿ ನನಗೆ ಪುನರ್ಜನ್ಮ ನೀಡಿದ್ದಾರೆ. ಕುಮಾರಸ್ವಾಮಿ ಬೆನ್ನಿಗೆ ನಿಂತು ನಾವೆಲ್ಲರೂ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಸಚಿವ ಸಂಪುಟ ರಚನೆ ವಿಷಯದಲ್ಲಿ ಯಾವ ಗೊಂದಲವೂ ಇಲ್ಲ. ಉಪಸಭಾಧ್ಯಕ್ಷ ಸ್ಥಾನವನ್ನು ಯಾರಾದರೂ ಯುವಕರಿಗೆ ಕೊಡಲಿ ಎಂಬುದು ನಮ್ಮ ಅಪೇಕ್ಷೆ. ನಾನು ಸಚಿವ ಸಂಪುಟದಲ್ಲಿ ಇರಬೇಕೋ ಬೇಡವೋ ಎಂಬುದನ್ನು ದೇವೇಗೌಡರು ನಿರ್ಧರಿಸುತ್ತಾರೆ ಎಂದರು.


ಸಂಬಂಧಿತ ಟ್ಯಾಗ್ಗಳು

H.vishwanath Cabinet ಆಕಾಂಕ್ಷಿ ಹೈಕಮಾಂಡ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ