ನೆಲಮಂಗಲ: ವ್ಯಕ್ತಿ ಅನುಮಾನಾಸ್ಪದ ಸಾವು!

Suspected death of a man at nelamangala!

05-06-2018

ಬೆಂಗಳೂರು: ನಗರದ ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನೀರಿನ ಸಂಪ್ ನೊಳಗೆ ವ್ಯಕ್ತಿಯ ಶವ ಪತ್ತೆಯಾಗಿದ್ದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ವಾಜರಹಳ್ಳಿಯಲ್ಲಿ ಕೆಲ ದಿನದ ಹಿಂದೆ ವಾಸವಿದ್ದ, ಆಂಧ್ರ ಪ್ರದೇಶದ ಕಲ್ಯಾಣದುರ್ಗ ಮೂಲದ ಈರಲಿಂಗಪ್ಪ ಕೊಲೆಯಾದವರು. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಈರಲಿಂಗಪ್ಪನನ್ನು ಪತ್ನಿ ಈಶ್ವರಮ್ಮ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಪತಿ ಈರಲಿಂಗಪ್ಪನನ್ನು ಕೊಂದು ಈಶ್ವರಮ್ಮ ನಂತರ ಪ್ರಕರಣವನ್ನ ಮುಚ್ಚಿಹಾಕಲು, ನೀರಿನ ಸಂಪ್ ನೊಳಗೆ ಹಾಕಿರುವುದು ಮೆಲ್ನೋಟಕ್ಕೆ ಕಂಡುಬಂದಿದೆ. ಸುಮಾರು ಮೂರ್ನಾಲ್ಕು ದಿನಗಳ ಹಿಂದೆಯೇ ಈ ದುರ್ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತ ದೇಹ ಸಂಪೂರ್ಣವಾಗಿ ಕೊಳೆತು ನಾರುತಿದ್ದು, ವಾಸನೆ ಮೇರೆಗೆ ಈ ಪ್ರಕರಣ ಬೆಳಕಿಗೆ ಬಂದಿದೆ.

ಪ್ರತಿದಿನ ಕ್ಷುಲ್ಲಕ ವಿಚಾರಕ್ಕೆ ಇಬ್ಬರು ಜಗಳವಾಡುತಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ನೂ ಹೆಂಡತಿ ಮೂರು-ನಾಲ್ಕು ದಿನದಿಂದ ನಾಪತ್ತೆಯಾಗಿರುವುದು ಇನ್ನಷ್ಟು ಅನುಮಾನಗಳಿಗೆ ಪುಷ್ಟಿ ನೀಡುವಂತೆ ಇದೆ. ನೆಲಮಂಗಲ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Suspect death Tank ಜಗಳ ಕೊಳೆತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ