ವೈದ್ಯರ ಮುಷ್ಕರ ಎಂಟು ರೋಗಿಗಳ ಸಾವು !

Kannada News

25-05-2017

ಪಾಟ್ನಾ:- ಬಿಹಾರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಎಂಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರಕದೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಕಿರಿಯ ವೈದ್ಯರ ಮೇಲೆ ಲಾಠಿ ಪ್ರಹಾರ ನಡೆದದ್ದನ್ನು ಖಂಡಿಸಿ ಕಿರಿಯ ವೈದ್ಯರು ಮುಷ್ಕರ ನಡೆಸಿದ್ದರಿಂದ, ಆಸ್ಪತ್ರೆಗೆ ದಾಖಲಾದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರಕಿಲ್ಲ ಎಂದು ಹೇಳಲಾಗಿದೆ. ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಮುಷ್ಕರನಿರತ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಆರೋಗ್ಯ ಸೇವೆ ದಿನವಿಡೀ ಅಸ್ತವ್ಯಸ್ತಗೊಂಡಿತ್ತು. ಸರ್ಕಾರ ನಿರ್ವಹಿಸುವ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇದಾಗಿದ್ದು, ತುರ್ತುಸೇವೆ ಹಾಗೂ ಹೊರರೋಗಿಗಳ ವಿಭಾಗ ಕೂಡಾ ಕಾರ್ಯನಿರ್ವಹಿಸರಲಿಲ್ಲ. ರಾಜ್ಯದ ಎಲ್ಲ ಏಳು ಸರ್ಕಾರಿ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜುಗಳ ವೈದ್ಯರು ಬುಧವಾರ ಒಂದು ದಿನದ ಮುಷ್ಕರ ನಡೆಸಿದರು. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿಲ್ಲದ ಕಾರಣ ನೂರಾರು ರೋಗಿಗಳು ಖಾಸಗಿ ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್‍ಗಳಲ್ಲಿ ಸರದಿಯಲ್ಲಿ ನಿಂತಿರುವ ದೃಶ್ಯ ಸಾಮಾನ್ಯವಾಗಿತ್ತು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ