ಸಂಪುಟ ವಿಸ್ತರಣೆ: ಕಲಬುರಗಿ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಆಕ್ರೋಶ!

karnataka Cabinet expansion: Outrage at kalburgi Congress

06-06-2018

ಕಲಬುರಗಿ: ಜೇವರ್ಗಿ ಕಾಂಗ್ರೆಸ್ ಶಾಸಕ ಡಾ.ಅಜಯ ಸಿಂಗ್ ಗೆ ಸಚಿವ ಸ್ಥಾನ ಸಿಗದ ಕಾರಣ ಕಾರ್ಯಕರ್ತರ, ಅಭಿಮಾನಿಗಳ ಆಕ್ರೋಶ ಭುಗಿಲೆದ್ದಿದೆ. ಕಲಬುರಗಿ ನಗರದ ಸೊನ್ ಕ್ರಾಸ್ ಬಳಿ ಟೈರಿಗೆ ಬೆಂಕಿ ಹಚ್ಚಿ ರಸ್ತೆ ತಡೆದು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಅಜಯ ಸಿಂಗ್ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರ. ಜೇವರ್ಗಿ ಕ್ಷೇತ್ರದಿಂದ ಎರಡನೇ ಬಾರಿಗೆ ಶಾಸಕರಾಗಿ ಅಜಯ್ ಸಿಂಗ್ ಆಯ್ಕೆಯಾಗಿದ್ದಾರೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬೆಂಬಲ ಇದ್ದರೂ ಸಚಿವ ಸ್ಥಾನ ಕೈತಪ್ಪಿದ್ದು, ಸಚಿವ ಸ್ಥಾನ ನೀಡಬೇಕೆಂದು ಪಟ್ಟು ಹಿಡಿದು ಅಜಯ ಸಿಂಗ್ ಅಭಿಮಾನಿಗಳು ಪ್ರತಿಭಟಿಸಿದ್ದಾರೆ.

 

 

 

 


ಸಂಬಂಧಿತ ಟ್ಯಾಗ್ಗಳು

Ajay Singh Jevargi ಅಭಿಮಾನಿ ಪ್ರತಿಭಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ