ಹೆಚ್.ಎಂ ರೇವಣ್ಣ ತೀವ್ರ ಅಸಮಾಧಾನ!

H.M revanna unhappy with congress high command!

06-06-2018

ಬೆಂಗಳೂರು: ಕೊನೆ ಕ್ಷಣದಲ್ಲಿ ಸಚಿವರ ಪಟ್ಟಿಯಿಂದ ತಮ್ಮನ್ನು ಹೊರಕ್ಕೆ ಇಟ್ಟಿದ್ದರಿಂದ ಪರಿಷತ್ ಸದಸ್ಯ ಹೆಚ್.ಎಂ ರೇವಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿ 11ರವರೆಗೆ ಸಚಿವ ಪಟ್ಟಿಯಲ್ಲಿ ಹೆಸರಿತ್ತು. ಮಧ್ಯ ರಾತ್ರಿ ವೇಳೆಗೆ ಬದಲಾಗಿದೆ ಎಂದು ಪರಿಷತ್ ಸದಸ್ಯ ಹೆಚ್.ಎಂ.ರೇವಣ್ಣ ಅಸಮಾಧಾನ ಹೊರಹಾಕಿದ್ದಾರೆ.

ಕುರುಬ ಸಮಾಜ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಕಷ್ಟ ಪಟ್ಟು ದುಡಿದ ಶ್ರಮಕ್ಕೆ ನೀಡಿದ ಅಗೌರವ ಇದಾಗಿದೆ. ಕುರುಬ ಹಾಗೂ ಮುಸ್ಲಿಂ ಸಮುದಾಯ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಪರವಾಗಿ ಮತ ನೀಡಿದೆ. ಈ ಎರಡೂ ಸಮುದಾಯಗಳಿಗೆ ಸಚಿವ ಸ್ಥಾನ ದೊರಕದಿರುವುದು ಅತೃಪ್ತಿ ತಂದಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಪಕ್ಷದ ಗತಿಯೇನು ಎಂದು ಪ್ರಶ್ನಿಸಿದ್ದಾರೆ. ಈ ಎರಡು ಸಮಾಜಗಳನ್ನು ತುಳಿಯಲು ಕಾಣದ ಕೈಗಳು ಕೆಲಸ ಮಾಡಿವೆ ಎಂದಿರುವ ಅವರು, ಕುರುಬ ಹಾಗೂ ಮುಸ್ಲಿಂ ಸಮುದಾಯಗಳಿಗೆ ಈ ಬೆಳವಣಿಗೆ ಆಘಾತ ತಂದಿದೆ ಎಂದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H.M Revanna vidhana parishad ಅಸಮಾಧಾನ ಸಮುದಾಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


&&&&&&&
  • &&
  • Professional